ಹಾವೇರಿ | ಗಾಂಧೀಜಿ, ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಆಚಾರ-ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ

Date:

Advertisements

“ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರು, ದೇಶ ಕಂಡ ಧೀಮಂತ ನಾಯಕರು. ಅವರ ಆಚಾರ -ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ” ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.

ಹಾವೇರಿಯ ಗಾಂಧಿಭವನದಲ್ಲಿ ಜಿಲ್ಲಾಡಳಿತದಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಸಲಾಯಿತು. ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿ, “ಗಾಂಧೀಜಿ ಅವರು ಅಹಿಂಸಾ ಹಾಗೂ ಸತ್ಯಾಗ್ರಹ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಮನುಷ್ಯ ನಿರ್ಮಾಣ ಮಾಡಿದ ಆಯುಧಕ್ಕಿಂತ ಹರಿತವಾದ ಆಯುಧ ಅಹಿಂಸಾ ಮಾರ್ಗವೆಂದು ಸಾರಿದರು. ಆದರೆ, ಇಂದು ಭಯೋತ್ಪಾದನೆ ಹಾಗೂ ಯುದ್ಧದ ಭೀತಿಯಿದೆ. ಇಂಥ ಹಿಂಸಾತ್ಮಕ ಕೃತ್ಯಗಳಿಂದ ಏನನ್ನೂ ಸಾಧಿಸಲಾಗದು” ಎಂದು ಹೇಳಿದರು.

“ಲಾಲ್ ಬಹದ್ದೂರ ಶಾಸ್ತ್ರಿ ಅವರು ದೇಶ ಕಂಡ ಸರಳ ಪ್ರಧಾನ ಮಂತ್ರಿಗಳಾಗಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಘೋಷವಾಕ್ಯದೊಂದಿಗೆ ರೈತರು ಹಾಗೂ ಯೋಧರನ್ನು ಹುರಿದುಂಬಿಸಿದವರು. ಗಾಂಧೀಜಿ ಹಾಗೂ ಶಾಸ್ತ್ರಿಯವರ ಆದರ್ಶ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯಬೇಕು. ಅವರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಷ್ಟ್ರಭಕ್ತಿ ಹೊಂದಬೇಕು” ಎಂದು ಹೇಳಿದರು.

WhatsApp Image 2024 10 05 at 15.43.57 586b60ff min e1728123396595
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಮಾಜಿ ಅರೆ ಸೈನಿಕರಿಂದ ಗಾಂಧಿ ಜಯಂತಿ ಆಚರಣೆ

ಬಳ್ಳಾರಿ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಗಾಂಧಿ ಪ್ರತಿಮೆಗೆ ಪುಷ್ಪಮಾಲೆ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

ಕಲಬುರಗಿ | ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ, ದಲಿತ, ಕನ್ನಡ, ವಿದ್ಯಾರ್ಥಿ,...

ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ನಗರದ ಶಕ್ತಿನಗರ ಬಡಾವಣೆಯಲ್ಲಿ ಜೈಭೀಮ್ ತರುಣ್ ಸಂಘ (ರಿ) ವತಿಯಿಂದ ಗುರುವಾರ...

Download Eedina App Android / iOS

X