ಕಾಂಗ್ರೆಸ್ ಸರಕಾರ ಸಂವೇದನೆ ಕಳೆದುಕೊಂಡಿದೆ: ಸಿ ಟಿ ರವಿ ಟೀಕೆ

Date:

Advertisements

ರಾಜ್ಯದ ಕಾಂಗ್ರೆಸ್ ಸರಕಾರ ಸಂವೇದನೆಯನ್ನೇ ಕಳೆದುಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿ, “ಬೆಳಗಾವಿಯಲ್ಲಿ ಸರಕಾರ, ಸಚಿವರಿಗೆ ಜನರ ಸಂಕಷ್ಟಕ್ಕಿಂತ ಚುನಾವಣೆಯ ಪ್ರತಿಷ್ಠೆಯೇ ದೊಡ್ಡದಾಗಿದೆ. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಮುಳುಗಿದ್ದಾರೆಯೇ ಹೊರತು ಜನರ ಸಂಕಷ್ಟ ಕೇಳುವ ಸಂವೇದನೆ ಅವರಿಗೆ ಇರಲಿಲ್ಲ” ಎಂದು ಕುಟುಕಿದರು.

“ಲಕ್ಷಾಂತರ ಹೆಕ್ಟೇರ್‌ಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ಮನೆ, ಜಾನುವಾರು ಕಳಕೊಂಡಿದ್ದಾರೆ. ಅನೇಕರು ಜೀವ ಕಳಕೊಂಡು ಸಂಕಷ್ಟದಲ್ಲಿದ್ದಾರೆ. ಈಗಲಾದರೂ ಸಂವೇದನೆ ತೋರಿಸಿ. ರೈತರ ಸಂಕಷ್ಟದ ನಡುವೆ ಅವರಿಗೆ ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎಂಬುದೇ ಮುಖ್ಯವಾಗಿದೆ. ಯಾರು ಮುಖ್ಯಮಂತ್ರಿ ಎಂಬುದು ಮುಖ್ಯವಲ್ಲ; ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನೀವು ರೈತರ, ಜನರ ಸಂಕಷ್ಟಕ್ಕೆ ಸ್ಪಂದಿಸಿ” ಎಂದು ಒತ್ತಾಯಿಸಿದರು.

Advertisements

“ಇದು ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎನ್ನುವ ಕಾಲವೇ ಎಂದು ಕೇಳಿದರು. ನಿಮಗೆ ಏನಾಗಿದೆ? ಇನ್ನು ಎರಡೂವರೆ ವರ್ಷ ನಾನೇ ಸಿಎಂ ಎನ್ನುತ್ತಾರೆ. 5 ವರ್ಷ ನಿಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ಭ್ರಷ್ಟಾಚಾರ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದಾರಾ? ಪ್ರಶ್ನೆ ಮಾಡಿದರು.

“ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ? ಜನ ನಮ್ಮ ಬಗ್ಗೆ ಏನು ಅಂದುಕೊಳ್ತಾರೆ ಎಂದು ಅನಿಸಲಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಗುತ್ತಿಗೆದಾರರು ನಿಮಗೇ ಈ ಪತ್ರ ಬರೆದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಕರ್ನಾಟಕದಲ್ಲಿ ಇನ್ನೂ 6 ದಿನ ಭಾರೀ ಮಳೆ

ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದ್ದು, ಅಕ್ಟೋಬರ್ 9ರವರೆಗೆ ಭಾರೀ...

ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ; ಆಸ್ಪತ್ರೆಯಿಂದ ಡಿಸ್‌ಚಾರ್ಜ್

ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

Download Eedina App Android / iOS

X