ಶಿವಮೊಗ್ಗ | ಅಮ್ಜದ್ ಹತ್ಯೆ ಯತ್ನ, ಐವರು ಸೆರೆ : ಪೊಲೀಸ್ ವರಿಷ್ಟಧಿಕಾರಿ ಮಿಥುನ್ ಕುಮಾರ್ ಮಾಹಿತಿ

Date:

Advertisements

ಶಿವಮೊಗ್ಗ, ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ಇರಿದಿದ್ದಾರೆ.

ಅಮ್ಜದ್ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಹಿಂದಿನಿಂದ ಬಂದ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.

Advertisements

ಚಾಕು ಇರಿದವರು ಅಪ್ರಾಪ್ತರು ಇರಬಹುದು ಎಂದು ಘಟನೆಯನ್ನು ನೋಡಿದವರು ಹೇಳಿದ್ದಾರೆ,” ಎಂದು ಎಸ್ಪಿ ಅವರು ತಿಳಿಸಿದರು.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ, ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಐವರಲ್ಲಿ ಮುಖ್ಯವಾಗಿ ಹಲ್ಲೆ ಮಾಡಿದ ಓರ್ವ ಆರೋಪಿಯನ್ನು ಸಹ ಬಂಧಿಸಲಾಗಿದೆ,” ಎಂದು ಅವರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | 5 ಕೋಟಿ ವಿಮಾ ಹಣ ದೋಚಲು ಅಮಾಯಕನ ಕೊಲೆ; ಆರೋಪಿಗಳ ಬಂಧನ

ನಕಲಿ ದಾಖಲೆ ಸೃಷ್ಟಿಸಿ 5.25 ಕೋಟಿ ಅಪಘಾತ ವಿಮೆ ದೋಚಲು ಅಮಾಯಕನ...

ಶಿವಮೊಗ್ಗ | ಜಾತಿ ಗಣತಿ ಹೆಸರಲ್ಲಿ ಮನೆಗೆ ನುಗ್ಗಿದ ದರೋಡೆಕೋರ ದಂಪತಿ

ಶಿವಮೊಗ್ಗ, ಜಾತಿ ಗಣತಿ ಹೆಸರಲ್ಲಿ ಮನೆಗೆ ನುಗ್ಗಿದ ದರೋಡೆಕೋರರಿಬ್ಬರು ಮಹಿಳೆಯೋರ್ವರ ಮೇಲೆ...

ಶಿವಮೊಗ್ಗ | ಶ್ರೀ ಮೈಲಾರೇಶ್ವರ ದಸರಾ ಹಾಗೂ ರಾಜಬೀದಿ ಉತ್ಸವ

ಶಿವಮೊಗ್ಗ ನಗರದ ಬಿ, ಹೆಚ್, ರಸ್ತೆಯಲ್ಲಿ ಇರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ...

ಶಿವಮೊಗ್ಗ | ಅ. 6ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಶಿವಮೊಗ್ಗ, ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು –...

Download Eedina App Android / iOS

X