ಉಡುಪಿ | 12ನೇ ದಿನಕ್ಕೆ ಕಾಲಿಟ್ಟ ಬೈಂದೂರು ರೈತರ ಧರಣಿ, ತಾಲೂಕು ಆಡಳಿತ ಸೌಧಕ್ಕೆ ಕೋಣಗಳನ್ನು ಕಟ್ಟಿ ಆಕ್ರೋಶ

Date:

Advertisements

ಬೈಂದೂರು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದ ಧರಣಿ ನೇತೃತ್ವವನ್ನು ವಸ್ರೆ, ಮೈಕಳ ಭಾಗದ ರೈತರು ವಹಿಸಿದ್ದು ತಾಲೂಕು ಆಡಳಿತ ಸೌಧಕ್ಕೆ ಕೋಣಗಳನ್ನು ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಕೋಣಗಳನ್ನು ಮೆರವಣಿಗೆ ಮೂಲಕ ಕರೆ ತಂದು ಬೈಂದೂರು ತಾಲೂಕು ಆಡಳಿತ ಕಛೇರಿ ಎದುರು ಕಂಬಳದ ಅಣುಕು ಪ್ರದರ್ಶನ ನಡೆಯಿತು. ಜಿಲ್ಲಾ ದಲಿತ ಸಂಘರ್ಷ ಸಮಿತಿ ಪ್ರಧಾನ ಸಂಚಾಲಕ, ನ್ಯಾಯವಾದಿ ಟಿ. ಮಂಜುನಾಥ ಗಿಳಿಯಾರು ಮಾತನಾಡಿ, ಬೈಂದೂರಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ಅನ್ಯಾಯವಾಗಿದೆ. ಜಿಲ್ಲಾಡಳಿತ ಸರಕಾರ ಪಕ್ಷಾತೀತವಾಗಿ ರಾಜಕೀಯ ನಾಯಕರು ತಮ್ಮ ರಾಜಕೀಯ ಉದ್ದೇಶ ಕೈಬಿಟ್ಟು ರೈತರ ಪರ ನಿಲ್ಲಬೇಕಿದೆ. ಸಂಸದರು, ಉಸ್ತುವಾರಿ ಸಚಿವರು ಆದಷ್ಟು ಶೀಘ್ರ ಭೇಟಿ ನೀಡಿ ರೈತರ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 10 03 at 7.43.09 AM

ಈ ಸಂದರ್ಭದಲ್ಲಿ ಉದ್ಯಮಿ ಯು.ಬಿ.ಶೆಟ್ಟಿ ರೈತ ನಿಯೋಗವನ್ನು ಭೇಟಿ ಮಾಡಿ ಸರಕಾರದ ಮಟ್ಟದಲ್ಲಿ ಸಹಕಾರ ನೀಡುವ ಭರವಸೆ ನೀಡಿದರು. ವಸ್ರೆ ಭಾಗದ ಮಾಜಿ ಗ್ರಾ.ಪಂ ಸದಸ್ಯ ರಾಜು ಪೂಜಾರಿ, ಸೋಮಯ್ಯ ಪೂಜಾರಿ ಸಹಿತ ನೂರಾರು ರೈತರು ಧರಣಿಯಲ್ಲಿ ಭಾಗವಹಿಸಿದ್ದರು. ಅರುಣ್ ಕುಮಾರ್ ಶಿರೂರು ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ವೀರಭದ್ರ ಗಾಣಿಗ ಕಾರ್ಯಕ್ರಮ ನಿರ್ವಹಿಸಿದರು.

Advertisements
WhatsApp Image 2025 10 03 at 7.43.08 AM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರ ರಾಜಕಾರಣದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಸ್ಥಾನ

ಹಾಸನ ಲೋಕಸಭಾ ಕ್ಷೇತ್ರದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರು...

ಬೀದರ್‌ | ಬಸವಾದಿ ಶರಣರ ತ್ಯಾಗ,ಬಲಿದಾನ ಮರೆಯದಿರಿ : ಬಸವಲಿಂಗ ಪಟ್ಟದ್ದೇವರು

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು...

Download Eedina App Android / iOS

X