ಶಿವಮೊಗ್ಗ | ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರುಪಾಯಿ ಕಳೆದುಕೊಂಡ ಮಹಿಳೆ ; ಪ್ರಕರಣ ದಾಖಲು

Date:

Advertisements

ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.

ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ.

ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ ನಟಿಸಿದ್ದಾರೆ. ನಂತರ ಮಹಿಳೆಗೆ ಎನ್‌ಎಸ್‌ಇ ಕಂಪನಿಯಲ್ಲಿ ಪಾರ್ಟ್‌ ಟೈಮ್‌ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು, ಅಷ್ಟೇ ಅಲ್ಲದೆ, ಎನ್‌ಎಸ್‌ಇ ಕಂಪನಿಯಿಂದ ನೀಡಲಾಗುವ ಕೆಲವು ಟಾಸ್ಕ್‌ಗಳನ್ನು ಪೂರ್ಣಗೊಳಿಸಿದರೆ ಭಾರೀ ಪ್ರಮಾಣದ ಲಾಭಾಂಶ ನೀಡುವುದಾಗಿ ನಂಬಿಸಿದ್ದಾರೆ.

Advertisements

ವಂಚಕರ ಮಾತನ್ನು ನಂಬಿದ ಮಹಿಳೆಯು ಸೆಪ್ಟೆಂಬರ್ 24, 2025 ರಿಂದ ಸೆಪ್ಟೆಂಬರ್ 29, 2025ರ ಅವಧಿಯೊಳಗೆ ಒಟ್ಟು 6,78,100 ಹಣವನ್ನು ವಂಚಕರ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಹಣ ವರ್ಗಾಯಿಸಿದ ನಂತರ, ವಂಚಕರು ಅವರಿಗೆ ಯಾವುದೇ ಲಾಭಾಂಶವನ್ನು ಹಿಂತಿರುಗಿಸಿಲ್ಲ. ಅಲ್ಲದೆ, ಮೊತ್ತವನ್ನು ಸಹ ಮರಳಿ ನೀಡದೇ ಮೋಸ ಮಾಡಿದ್ದಾರೆ.

ತಮಗೆ ವಂಚನೆಯಾಗಿರುವುದನ್ನು ಅರಿತ ಮಹಿಳೆಯು ಶಿವಮೊಗ್ಗ ಸಿಇಎನ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೊಲೆಗೈದು ಅಸಹಜ ಸಾವು ಎಂದು ಬಿಂಬಿಸಿದ ತಾಯಿ : ಪೊಲೀಸರಿಂದ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು...

ರಾಷ್ಟ್ರ ರಾಜಕಾರಣದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಸ್ಥಾನ

ಹಾಸನ ಲೋಕಸಭಾ ಕ್ಷೇತ್ರದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರು...

Download Eedina App Android / iOS

X