ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾರೆ. ಮಕ್ಕಳ ಸಾವಿನ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವು, ‘2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ’ ಎಂದು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಆರೋಗ್ಯ ಸೇವೆಗಳ ನಿರ್ದೇಶನಾಲಯ(DGHS) ಪ್ರಕಟಣೆ ಹೊರಡಿಸಿದೆ. “ನಿರ್ದೇಶನವು ಭಾರತದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ. 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿಗೆ ಸಿರಪ್ ನೀಡುವ ಅಗತ್ಯ ಇರುವುದಿಲ್ಲ. ಮಕ್ಕಳಿಗೆ ತೀರಾ ಅಗತ್ಯವಿದ್ದರೆ ಮಾತ್ರ ಕೆಮ್ಮಿನ ಸಿರಪ್ ನೀಡಬೇಕು. ಇಲ್ಲದಿದ್ದಲ್ಲಿ, ಕೆಮ್ಮಿನ ಸಿರಪ್ ನೀಡುವುದನ್ನು ‘ಅವಾಯ್ಡ್’ ಮಾಡಬೇಕು” ಎಂದು ಸೂಚಿಸಿದೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿ 9 ಮಕ್ಕಳ ಸಾವನ್ನಪ್ಪಿದ್ದಾರೆ. ಅಂತೆಯೇ, ರಾಜಸ್ಥಾನದ ಸಿಕಾರ್ನಲ್ಲಿ ಇದೇ ರೀತಿ ಇಬ್ಬರು ಮಕ್ಕಳು ಸಾವಪ್ಪಿದ ಘಟನೆಗಳು ವರದಿಯಾಗಿವೆ.