ಆಂಧ್ರಪ್ರದೇಶದ ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರಿಗೆ ವಾರ್ಷಿತ 15 ಸಾವಿರ ರೂ. ಆರ್ಥಿಕ ನೆರವು ನೀಡುವ ಯೋಜನೆಗೆ ಆಂಧ್ರ ಪ್ರದೇಶ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಆಟೋ ಡ್ರೈವರ್ ಸೆವಾಲೋ – ಯೋಜನೆ’ಗೆ ಸಮ್ಮಿತಿ ದೊರೆತಿದೆ ಎಂದು ಆಂಧ್ರ ಸಚಿವ ಕೆ ಪಾರ್ಥಸಾರಥಿ ತಿಳಿಸಿದ್ದಾರೆ.
“ಯೋಜನೆಯಡಿ ಅರ್ಹ 2.9 ಲಕ್ಷಕ್ಕೂ ಹೆಚ್ಚು ಆಟೋ ಮತ್ತು ಕ್ಯಾಬ್ ಚಾಲಕರಿಗೆ ವಾರ್ಷಿಕ 15 ಸಾವಿರ ರೂಪಾಯಿ ನೆರವು ನೀಡಲಾಗುತ್ತದೆ. ಆಟೋ ಮತ್ತು ಕ್ಯಾಬ್ ಚಾಲಕರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಯೋಜನೆಯು ಸಹಕಾರಿಯಾಗಲಿದೆ. ಯೋಜನೆಗಾಗಿ 2025-26ರ ಆರ್ಥಿಕ ವರ್ಷದಲ್ಲಿ 436 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.
ಯೋಜನೆಗೆ ಶನಿವಾರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಾಲನೆ ನೀಡಲಿದ್ದಾರೆ.