- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂತಿಮ ಮುದ್ರೆ
- ಅಧಿಕೃತವಾಗಿ ರಾಜ್ಯಪತ್ರದಲ್ಲಿ ಶನಿವಾರ ಆಯ್ಕೆ ಆದೇಶ ಪ್ರಕಟ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್‌ಗೆ ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಅಂತಿಮಗೊಳಿಸಿ, ಮಾಡಿದ್ದ ನಾಮನಿರ್ದೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂತಿಮ ಮುದ್ರೆ ಒತ್ತಿದ್ದಾರೆ.
ಅಧಿಕೃತವಾಗಿ ರಾಜ್ಯಪತ್ರದಲ್ಲಿ ಶನಿವಾರ ಪ್ರಕಟಗೊಂಡಿದ್ದು, ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಸುಧಾಮ್ ದಾಸ್ ಅವರು ನಾಮನಿರ್ದೇಶನ ಸದಸ್ಯರಾಗಿ ನೇಮಕವಾಗಿದ್ದಾರೆ.
ಕಲಾವಿದರ ಕೋಟಾದಡಿ ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದ್ದು, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ಸುಧಾಮ್ ದಾಸ್ ಅವರ ಹೆಸರು ಅಂತಿಮಗೊಳಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಣದಿಂದ ಸುಧಾಮ್ ದಾಸ್ ಹೆಸರು ಪಾಸಾಗಿದ್ದು, ಸಿದ್ದರಾಮಯ್ಯ ಬಣದಿಂದ ಉಮಾಶ್ರೀ ಹೆಸರು ಅಂತಿಮಗೊಂಡಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು
ಎಂ ಆರ್ ಸೀತಾರಾಮ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚಿನ ಮಾಹಿತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಅಲ್ಲದೇ ವಿಧಾನಪರಿಷತ್ ನಾಮನಿರ್ದೇಶನದಲ್ಲಿ ದುಡಿದವರಿಗೆ ಆದ್ಯತೆ ನೀಡಿಲ್ಲ ಎಂಬ ಕೂಗು ಕಾಂಗ್ರೆಸ್‌ನಲ್ಲಿ ಬಲವಾಗಿ ಕೇಳಿ ಬಂದಿತ್ತು. ಮುಂದುವರಿದು ಹೈಕಮಾಂಡ್‌ಗೆ ಕೆಲವು ನಾಯಕರು ಕೂಡ ಪತ್ರ ಬರೆದು, ಅಸಮಾಧಾನ ವ್ಯಕ್ತಪಡಿಸಿದ್ದರು.