ಉಡುಪಿ | ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ; ಕೋಟ್ಯಂತರ ರೂ. ನಷ್ಟ

Date:

Advertisements

ಉಡುಪಿ ನಗರಸಭೆಗೆ ಸಂಬಂಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ.

ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿತು. ಇದರಿಂದ ಕಟ್ಟಡ, ಶೆಡ್‌ನಲ್ಲಿರುವ ಹಲವು ಯಂತ್ರೋಪಕಣಗಳು, ತ್ಯಾಜ್ಯಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎರಡು ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ಸುಮಾರು 6-7ಕೋಟಿ ರೂ. ನಷ್ಟ ಉಂಟಾಗಿರಬಹುದೆಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಡಿಸಿ ಸೂಚನೆ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಾದ ಅತಿಹೆಚ್ಚು ಮಳೆ ಪ್ರದೇಶಗಳ ಪೈಕಿ...

ವಿಜಯಪುರ | ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಚುನಾವಣೆ; ಅ.12ರಂದು ಮತದಾನ

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ...

ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು....

Download Eedina App Android / iOS

X