ಎನ್‌ಡಿಆರ್‌ಎಫ್‌ ಅನುದಾನ | ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ನೋಡುವುದು ಬಿಡಬೇಕು: ಸಿದ್ದರಾಮಯ್ಯ

Date:

Advertisements

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ” ಎಂದರು.

ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ

Advertisements

“ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ” ಎಂದು ಹೇಳಿದರು.

ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ

ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಬಸವ ಸಂಸ್ಕೃತಿ ಅಭಿಯಾನʼ ಸಮಾರೋಪ ನಾಡಿನ ಉತ್ಸವವಾಗಲಿ

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಶಯಗಳನ್ನು ಹೊತ್ತುಕೊಂಡು ರಾಜ್ಯದ ಮಠಾಧೀಶರು, ಒಕ್ಕೂಟದ...

ದಾವಣಗೆರೆ | ಮಹರ್ಷಿ ವಾಲ್ಮೀಕಿ ಜಯಂತೋತ್ಸವ: ಐತಿಹಾಸಿಕ ಬೈಕ್‌ ರ‍್ಯಾಲಿ 

ʼʼಜಿಲ್ಲಾ ವಾಲ್ಮೀಕಿ ಯುವ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ  ಅಕ್ಟೋಬರ್...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಇಂದಿಗೆ ಗುರಿ ಮುಟ್ಟಿದ್ದೆಷ್ಟು?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮಗ್ರ ಸಾಮಾಜಿಕ, ಆರ್ಥಿಕ...

ಸಿನಿಮಾ ಟಿಕೆಟ್‍ ದರ ಮಿತಿ | ತಡೆಯಾಜ್ಞೆ ಮುಂದುವರಿಕೆ, ಮೇಲ್ಮನವಿ ಅರ್ಜಿ ಅಂತಿಮ ತೀರ್ಪಿನಲ್ಲಿ ಸಿಲುಕಿದರೆ ಹಣ ವಾಪಸ್!

ರಾಜ್ಯದ ಎಲ್ಲ ಮಲ್ಟಿಫ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ.ಗಳ...

Download Eedina App Android / iOS

X