ಗ್ರಾಮೀಣ ಜನರಿಗಾಗಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಲೋಕಾರ್ಪಣೆಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಹತ್ವದ ವಿಷಯಗಳನ್ನು ಗ್ರಾಮೀಣ ಜನಸಾಮಾನ್ಯರಿಗೆ ಸರಳವಾಗಿ ತಿಳಿಸಲು ‘ಗ್ರಾಮದನಿ’ ಪಾಡ್‌ಕಾಸ್ಟ್‌ ಸರಣಿಯನ್ನು ಪ್ರಾರಂಭಿಸಲಾಗಿದ್ದು, ಇದನ್ನು ಗ್ರಾಮೀಣಾಭಿವೃದ್ಧಿ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಲೋಕಾರ್ಪಣೆ ಮಾಡಿದರು.

ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕರ್ನಾಟಕದ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯು (ANSSIRDPR) ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿದೆ. ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು ಎಂದು ಹೇಳಿದ ಸಚಿವರು ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು, ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ ಶಕ್ತಿಯುತ ಅರಿವಿನ ಮಾಧ್ಯಮವಾಗಲಿದೆ” ಎಂದು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ: ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

“ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‌ಕಾಸ್ಟ್ ನ ಪ್ರಮುಖ ಉದ್ದೇಶಗಳಾಗಿದ್ದು, ಪ್ರಮುಖವಾಗಿ ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ಸುಲಭವಾಗಿ ತಲುಪಿಸಲು ಇದು ಸೂಕ್ತ ವೇದಿಕೆಯಾಗಲಿದೆ; ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳಿಗೆ ಸಂಬಂಧಿಸಿದ ನಿಯಮಗಳು, ಒಟ್ಟಾರೆ ಪಂಚಾಯತ್‌ ವ್ಯವಸ್ಥೆಯ ಡಿಜಿಟಲೀಕರಣ ಕುರಿತ ಮಾರ್ಗಸೂಚಿಗಳು, ಪಂಚತಂತ್ರ 2.0 ತಂತ್ರಾಂಶದಲ್ಲಿ ಇಂದೀಕರಿಸುವ ವಿಧಾನ ಮುಂತಾದ ಹಲವು ಉಪಯುಕ್ತ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳನ್ನು ಇಲ್ಲಿ ಪ್ರಸಾರ ಮಾಡಲಾಗುತ್ತದೆ. ‘ಗ್ರಾಮದನಿ’ ಪಾಡ್‌ಕಾಸ್ಟ್‌ ಸರಣಿಯು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಪ್ರಸಾರ ಮಾಡುವ ಮತ್ತು ಆಡಳಿತ ಸುಧಾರಣೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಡಿ.ರಣದೀಪ್‌, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯುವಕ ಯತ್ನ, ಸ್ಥಿತಿ ಗಂಭೀರ

ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35)​​ ಎಂಬಾತ ನಮ್ಮ ಮೆಟ್ರೋ...

ಹಾವೇರಿ | ಡಿಜಿಟಲ್ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು: ಮುಹಮ್ಮದ್ ಇಸ್ಮಾಯಿಲ್

"ಸೈಬರ್ ವಂಚನೆಯಿಂದ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂಪಾಯಿ ಜನರು ವಂಚನೆಗೆ ಒಳಗಾಗುತ್ತಿದ್ದಾರೆ....

ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿಗೆ ಜೆಡಿಯು ಪಕ್ಷದಿಂದ ಚಾಲನೆ

ಕೋಲಾರ: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ...

Download Eedina App Android / iOS

X