ಮಹಾರಾಷ್ಟ್ರಕ್ಕೆ ‘ಶಕ್ತಿ’ ಚಂಡಮಾರುತದ ಭೀತಿ: ಕರ್ನಾಟಕದಲ್ಲಿ ಭಾರೀ ಮಳೆ ಸೂಚನೆ

Date:

Advertisements

ಮಹಾರಾಷ್ಟ್ರ ಕರಾವಳಿ ಭಾಗಕ್ಕೆ ಶಕ್ತಿ ಚಂಡಮಾರುತ ಅಪ್ಪಳಿಸಲಿದೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮತ್ತು ಮಳೆ ಬೀಸುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಅಕ್ಟೋಬರ್ 4 ಮತ್ತು 7ರ ನಡುವೆ ಬೃಹತ್ ಮತ್ತು ಮಧ್ಯಮ ಚಂಡಮಾರುತ ಬೀಸಲಿದೆ. ಮುಂಬೈ, ಥಾಣೆ, ಪಾಲ್ಘರ್, ರಾಯಗಡ್, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಲಿದೆ. ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 45-55 ಕಿ.ಮೀ.ನಿಂದ 65 ಕಿ.ಮೀ.ವರೆಗೆ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದ ಪೂರ್ವ ಪ್ರದೇಶಗಳಾದ ವಿದರ್ಭ ಮತ್ತು ಮರಾಠವಾಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಜಿಲ್ಲಾಡಳಿತಗಳು ತಮ್ಮ ವಿಪತ್ತು ನಿರ್ವಹಣಾ ತಂಡಗಳನ್ನು ಸಕ್ರಿಯಗೊಳಿಸಬೇಕು. ಕರಾವಳಿ ಮತ್ತು ತಗ್ಗು ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು, ಸಮುದ್ರ ಪ್ರಯಾಣ ನಡೆಸದಂತೆ ಸೂಚಿಸಬೇಕು ಎಂದು ಸರ್ಕಾರ ಮತ್ತು ಜಿಲ್ಲಾಡಳಿತಗಳಿಗೆ ಇಲಾಖೆ ಸೂಚಿಸಿದೆ.

ಈ ಲೇಖನ ಓದಿದ್ದೀರಾ?: ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆ ಸುರಿಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುರ್ಗಾ ಪೂಜೆ ವೇಳೆ ಅವಗಢ; ಮಧ್ಯಪ್ರದೇಶದಲ್ಲಿ 14 ಮಂದಿ ಸಾವು

ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ದುರ್ಗಾ ಪೂಜೆ ವೇಳೆ ಖಾಂಡ್ವಾ ಮತ್ತು ಶಹದೋಲ್ ಜಿಲ್ಲೆಗಳಲ್ಲಿ...

ಸೋನಮ್ ವಾಂಗ್‌ಚುಕ್ ಬಂಧನ ಪ್ರಶ್ನಿಸಿ ಪತ್ನಿಯಿಂದ ಸುಪ್ರೀಂ ಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಲಡಾಖ್‌ನ ಪರಿಸರ ಕಾರ್ಯಕರ್ತ ಹಾಗೂ ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಬಂಧನವನ್ನು...

ಭಾರತ ಅವಮಾನ ಸ್ವೀಕರಿಸದು: ಅಮೆರಿಕಕ್ಕೆ ಪುಟಿನ್‌ ತಿರುಗೇಟು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌...

ಇದೇ ಮೊದಲ ಬಾರಿಗೆ ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ; ಐತಿಹಾಸಿಕ ಹೆಜ್ಜೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ...

Download Eedina App Android / iOS

X