ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

Date:

Advertisements

ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ರೈತರ ಅಹವಾಲು ಆಲಿಸಿತು.

ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಅಕಾಲಿಕ ಮಳೆ ಹಾಗೂ ನದಿ ಪ್ರವಾಹದಿಂದ ದೊಡ್ಡ ಮಟ್ಟದ ನೀರು ಹೊಲಗಳಿಗೆ ನುಗ್ಗಿದ ಪರಿಣಾಮ ಬೆಳೆಗಳಿಗೆ ಆಗಿರುವುದನ್ನು ವೀಕ್ಷಿಸಿದರು. ಅಪಾರ ಪ್ರಮಾಣದ ತೊಗರಿ, ಸೂರ್ಯಪಾನ, ಕಬ್ಬು ನೀರಿನ ಪ್ರವಾಹಕ್ಕೆ ಸಿಲುಕಿದ್ದನ್ನು ಕಂಡು ಆತಂಕ ವ್ಯಕ್ತಪಡಿಸಿದರು.

“ಈ ಸರ್ಕಾರಕ್ಕೆ ಜವಾಬ್ದಾರಿಯೇ ಇಲ್ಲದಂತಾಗಿದೆ, ಇಷ್ಟೊಂದು ತೊಂದರೆ ಎದುರಿಸುತ್ತಿದ್ದರೂ ಸ್ಥಳಕ್ಕೆ ಭೇಟಿ ನೀಡುವ ಸೌಜನ್ಯವೂ ಅವರಿಗೆ ಇಲ್ಲ ಎಂಬುದು ಬೇಜವಾಬ್ದಾರಿ ಸಂಗತಿ, ಆದರೆ ಪ್ರತಿಪಕ್ಷವಾಗಿರುವ ನಾವು ನಿಮ್ಮ ಧ್ವನಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ” ಎಂದು ಆರ್‌ ಅಶೋಕ್‌ ಹೇಳಿದರು.

ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಚುನಾವಣೆ; ಅ.12ರಂದು ಮತದಾನ

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ...

ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು....

ಬದುಕು ಸಂಭ್ರಮವಾಗಿಸೋಣ; ಹಬ್ಬಗಳ ಅಂದಗಾಣಿಸೋಣ!

ಇತ್ತೀಚೆಗೆ ಕಾಟಾಚಾರದಂತಾಗಿರುವ ಹಬ್ಬಗಳು ಸಪ್ಪೆ ಅನಿಸತೊಡಗಿವೆ. ಆ ದಿನಗಳ‌ ಸಂಭ್ರಮ ಮೆಲುಕು...

ʼಬಸವ ಸಂಸ್ಕೃತಿ ಅಭಿಯಾನʼ ಸಮಾರೋಪ ನಾಡಿನ ಉತ್ಸವವಾಗಲಿ

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಶಯಗಳನ್ನು ಹೊತ್ತುಕೊಂಡು ರಾಜ್ಯದ ಮಠಾಧೀಶರು, ಒಕ್ಕೂಟದ...

Download Eedina App Android / iOS

X