ಸೊರಬ | ಹಬ್ಬದ ಹೋರಿ ಜೈ ಹನುಮಾನ್ ಅನಾರೋಗ್ಯದಿಂದ ಸಾವು

Date:

Advertisements

ಸೊರಬ, ತಾಲೂಕಿನ ಗಡಿಭಾಗ ಹುಣಸೇಕಟ್ಟೆ ಗ್ರಾಮದ ಜೈ ಹನುಮಾನ್ ಎಂದೇ ಪ್ರಸಿದ್ಧವಾಗಿದ್ದ ಹಬ್ಬದ ಹೋರಿ(17ವರ್ಷ) ಶನಿವಾರ ಬೆಳಗಿನ ಜಾವ ಅನಾರೋಗ್ಯದಿಂದ ಮೃತಪಟ್ಟಿದೆ.

ದಶಕಗಳ ಕಾಲ ಜಿಲ್ಲೆ ಸೇರಿದಂತೆ ಹಾವೇರಿ, ಉತ್ತರ ಕನ್ನಡ ಸುತ್ತಲಿನ ಜಿಲ್ಲೆಗಳಲ್ಲಿ ಎಲ್ಲಿಯೇ ಹೋರಿ ಬೆದರಿಸುವ ಸ್ಪರ್ಧೆ ನಡೆಯಲಿ ಅಲ್ಲಿ ಹುಣಸೇಕಟ್ಟೆ ಜೈ ಹನುಮಾನ್ ಸ್ಪರ್ಧಿಸುತ್ತಿತ್ತು.ಅಖಾಡದಲ್ಲಿ ಜೈ ಹನುಮಾನ್ ಹೋರಿ ಬರುತ್ತದೆ ಎಂದೊಡನೆ ಪ್ರೇಕ್ಷಕರ ಹಾಗೂ ಅಭಿಮಾನಿಗಳ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿ ಕೇಳಿ ಬರುತ್ತಿದ್ದವು.

ಅಖಾಡದಲ್ಲಿ ಮಿಂಚಿನ ಓಟ ಹಾಗೂ ಆ‌್ಯಕ್ಷನ್ ಮೂಲಕವೇ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇನ್ನು ನೆನಪು ಮಾತ್ರ.

ಹೋರಿ ಹಬ್ಬದ ಮೂಲಕವೇ ಹುಣಸೇಕಟ್ಟೆ ಗ್ರಾಮಕ್ಕೆ ಹೆಸರು ತಂದ ಕೀರ್ತಿ ಜೈ ಹನುಮಾನ್ ಹೋರಿಗೆ ಸಲ್ಲುತ್ತದೆ. ತಾಲೂಕಿನ ಕುದುರೆಗಣಿ ಗ್ರಾಮದಲ್ಲಿ ಬಂಪರ್ ಬಹುಮಾನ ಬೈಕ್ ಸೇರಿದಂತೆ ಒಂದು ತೊಲ ಬಂಗಾರ, ಐದು ಗಾದ್ರೇಜ್, ಡ್ರೆಸಿಂಗ್ ಟೇಬಲ್ ಗಳು, ಟಿವಿಗಳು, ರೆಪ್ತಿಜರೇಟರ್ ಗಳು ಹೀಗೆ ನೂರಾರು ಬಹುಮಾನಗಳನ್ನು ಗೆಲ್ಲುವ ಮೂಲಕ ಹೋರಿ ಹಬ್ಬದಲ್ಲಿ ಇತಿಹಾಸ ಸೃಷ್ಠಿಸಿತ್ತು ಜೈ ಹನುಮಾನ್ ಹೆಸರಿನ ಹೋರಿ.

ಶಿಕಾರಿಪುರ ತಾಲೂಕಿನ ಹುಣಸೇಕಟ್ಟೆ ಗ್ರಾಮದ ತುಕಾರಾಮ್ ಅವರು ಜೈ ಹನುಮಾನ್ ಹೋರಿಯನ್ನು ಸಲುಹಿದ್ದರು. ಮನೆಯಲ್ಲಿಯೇ ಜನಿಸಿದ್ದ ಹೋರಿಯನ್ನು ಅತ್ಯಂತ ಪ್ರೀತಿಯಿಂದ ಸಾಕಿದ್ದರು. ಹೋರಿ ಸಾವನ್ನಪ್ಪುತ್ತಿದ್ದಂತೆ ತುಕಾರಾಂ ಮನೆಯ ಸದಸ್ಯರು ತಮ್ಮ ಮನೆಯ ಸದಸ್ಯನನ್ನೇ ಕಳೆದುಕೊಂಡ ದುಃಖದಲ್ಲಿದ್ದಾರೆ. ಕೊಟ್ಟಿಗೆಯಲ್ಲಿ ಚಿಕ್ಕ ಕರುವಿನಂತೆ ಕುಟುಂಬ ಸದಸ್ಯರೊಂದಿಗೆ ವರ್ತಿಸುತ್ತಿದ್ದ ಹೋರಿ ಅಖಾಡದಲ್ಲಿ ಇಳಿಯುತ್ತಿದ್ದಂತೆ ರೌದ್ರಾವತಾರ ತಾಳುತ್ತಿತ್ತು. ಹೋರಿಯ ಮಾಲೀಕರು ಮತ್ತು ಅಭಿಮಾನಿಗಳು ಹೋರಿಯ ಅಂತಿಮಯಾತ್ರೆ ನಡೆಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂತಿಮ ಯಾತ್ರೆ ಸಂಚರಿಸಿತು. ವಿವಿಧ ವಾಧ್ಯಗಳೊಂದಿಗೆ ಪಟಾಕಿ ಸಿಡಿಸುವ ಮೂಲಕ ಹೋರಿಯ ಅಂತಿಮ ಯಾತ್ರೆ ನಡೆಸಲಾಯಿತು. ಮಹಿಳೆಯರು ಸೇರಿದಂತೆ ಅಭಿಮಾನಿಗಳು ಹೂಮಾಲೆ ಹಾಕಿ ನೈವೇದ್ಯ ಅರ್ಪಿಸಿದರು. ಗ್ರಾಮದಲ್ಲಿ ಶೋಕಸಾಗರ ಮುಗಿಲು ಮುಟ್ಟಿತ್ತು. ಹಿಂದೂ ಧಾರ್ಮಿಕ ವಿಧಿವಿಧಾನದಂತೆ ಜೈ ಹನುಮಾನ್ ಹೋರಿಯ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಜನಪದ ಕ್ರೀಡೆ ಹೋರಿ ಹಬ್ಬ ಆಚರಣಾ ಸಮಿತಿ ಜಿಲ್ಲಾಧ್ಯಕ್ಷ ಜೆ.ಎಸ್. ಚಿದಾನಂದ ಗೌಡ, ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ ಹರಗಿ ಸೇರಿದಂತೆ ಸಾವಿರಾರು ಜನ ಹೋರಿಯ ಅಂತಿಮ ದರ್ಶನ ಪಡೆದು, ಹೋರಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು ...

ತುಮಕೂರು | ವಿಧಾನಸಭೆ, ಲೋಕಸಭೆಯಲ್ಲಿ ಒಬಿಸಿಗೂ ಮೀಸಲಾತಿ ಬೇಕು : ಕೆ.ಎನ್.ರಾಜಣ್ಣ

ಪರಿಶಿಷ್ಟ ಜಾತಿ-ಪಂಗಡದವರಿಗೆ ಇರುವಂತೆ ಚುನಾವಣೆಗಳಲ್ಲಿ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರಗಳಲ್ಲಿ ಹಿಂದುಳಿದ...

ಬೀದರ್‌ | ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಲಿ : ರಾಜಕುಮಾರ್‌ ಅಲ್ಲೂರೆ

ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು...

Download Eedina App Android / iOS

X