ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ ಹಾಗೂ ಕವಿತೆ ಬರೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ಭಾಗವಹಿಸುವ ಯುವಕ/ಯುವತಿಯರು 15 ರಿಂದ 29 ವರ್ಷ ವಯೋಮಿತಿಯೊಳಗಿದ್ದು, ನೋಂದಣಿ ಸಮಯದಲ್ಲಿ ಆಧಾರ್ ಕಾರ್ಡ್/ಎಸ್.ಎಸ್.ಎಲ್.ಸಿ. ಅಂಕಪಟ್ಟಿ/ ಜನನ ಪ್ರಮಾಣ ಪತ್ರ ಇವುಗಳಲ್ಲಿ ಯಾವುದಾದೊಂದು ದಾಖಲೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಶಿವಮೊಗ್ಗ ಜಿಲ್ಲೆಯಲ್ಲಿ ವಾಸವಾಗಿರುವ ದೃಢೀಕರಣ ಪತ್ರವನ್ನು ತರಬೇಕು. ರಾಷ್ಟçಮಟ್ಟದ ಯುವಜನೋತ್ಸವದಲ್ಲಿ ಸತತವಾಗಿ 3 ವರ್ಷಗಳು ಭಾಗವಹಿಸಿದ್ದು ಅಥವಾ ಒಂದು ಬಾರಿ ಪದಕ ಪಡೆದಿದ್ದರೆ ಅಂತಹ ಯುವಜನರು ಭಾಗವಹಿಸುವಂತಿಲ್ಲ.
ಆಸಕ್ತರು ಅ. 14 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಕಚೇರಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಕಚೇರಿಯನ್ನು ಸಂಪರ್ಕಿಸುವುದು.