ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35) ಎಂಬಾತ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ಮಧ್ಯಾಹ್ನ 3.19ರ ಸುಮಾರಿಗೆ ವೀರೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪ್ಲಾಟ್‌ಫಾರಂ 3ರಲ್ಲಿ ಮೆಟ್ರೋ ರೈಲಿನಡಿ ಸಿಲುಕಿದ್ದ ವೀರೇಶ್ ನನ್ನು ಮೆಟ್ರೋ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವೀರೇಶ್‌ನನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.