ಕಲಬುರಗಿ | ಹಳೆಯ ವೈಷಮ್ಯಕ್ಕೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ

Date:

Advertisements

ಹಳೆಯ ವೈಷಮ್ಯದ ಹಿನ್ನೆಲೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಶ್ರೀಮಂತರಾಯ (32) ಎಂದು ಗುರುತಿಸಲಾಗಿದೆ.

ಹಳೆಯ ವೈಷಮ್ಯ ಹಿನ್ನೆಲೆ ಪಾರ್ಟಿ ನೆಪದಲ್ಲಿ ಮದ್ಯಪಾನ ಮಾಡಿಸಿ ಶ್ರೀಮಂತರಾಯ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಕಲಬುರಗಿ | ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Advertisements

ಘಟನೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌ಡಿ, ಎಸಿಪಿ, ಪಿಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಮಾಹಿತಿ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ರೈತರ ಪರ ಎಐಕೆಕೆಎಂಎಸ್,ಎಸ್‌ಯುಸಿಐ(ಸಿ) ಬೃಹತ್ ಪ್ರತಿಭಟನೆ

ಜಿಲ್ಲೆಯಾದ್ಯಂತ ಬಂದ ನಿರಂತರ ಮಳೆ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ,...

ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ಹುಲಿ ಸಿಂಹಧಾಮದಲ್ಲಿ 6 ಹೊಸ ಪ್ರಾಣಿಗಳು

ಶಿವಮೊಗ್ಗ, ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಸದಸ್ಯರ ಆಗಮನವಾಗಿದೆ....

ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು ...

Download Eedina App Android / iOS

X