ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಸ್ಕಿ ತಾಲ್ಲೂಕಿನ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಮೃತರನ್ನು ಲಿಂಗಸೂಗೂರು ತಾಲ್ಲೂಕಿನ ಮುದಗಲ ಪಟ್ಟಣದ ಯಲ್ಲಾಲಿಂಗ (28) ಹಾಗೂ ವೆಂಕಟೇಶ (28) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರೂ ಮುದಗಲ ಪಟ್ಟಣದಿಂದ ಮಸ್ಕಿ ನಗರಕ್ಕೆ ಸಿನಿಮಾ ವೀಕ್ಷಿಸಲು ಬಂದಿದ್ದರು. ಈಜಲು ಕಾಲುವೆಗೆ ತೆರಳಿದಾಗ ಸಂಭವಿಸಿದೆ ಎಂದು ತಿಳಿದುಬಂದಿದೆ. ಒಬ್ಬ ಯುವಕನ ಮೃತದೇಹ ಪತ್ತೆಯಾಗಿದೆ ಮತ್ತು ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ದಿನದಲ್ಲಿ ಸಮೀಕ್ಷೆ ಮುಕ್ತಾಯ : ಶಿಕ್ಷಕನ ಕಾರ್ಯಕ್ಕೆ ಜಿಲ್ಲಾಡಳಿತ ಪ್ರಶಂಸೆ
ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಯುವಕನ ಮೃತದೇಹ ಪತ್ತೆಯಾಗಿದೆ ಮತ್ತು ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
