ಸೈಬರ್ ವಂಚನೆ ಕುರಿತು ಜಾಗೃತಿ ಅಭಿಯಾನದ ಕುರಿತು ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮುಖಂಡರು ಭೇಟಿ ನೀಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ರಚಿಸಲಾದ ಡಿಜಿಟಲ್ ಸ್ವಾತಂತ್ರ್ಯ ಪುಸ್ತಕವನ್ನು ಶಾಸಕರಿಗೆ ಹಸ್ತಾಂತರ ಮಾಡಲಾಯಿತು.
ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಸೈಬರ್ ವಂಚನೆ ಸಮಸ್ಯೆಯನ್ನು ಪ್ರಸ್ತಾಪಿಸುವಂತೆ ಶಾಸಕರಿಗೆ ಮನವಿ ಮಾಡಲಾಯಿತು. ರಾಜ್ಯಾದ್ಯಂತ ನಡೆಯುತ್ತಿರುವ ಈ ಜಾಗೃತಿ ಅಭಿಯಾನವನ್ನು ಶಾಸಕರು ಮೆಚ್ಚಿ, ರಾಣೆಬೆನ್ನೂರಿನಲ್ಲಿ ಸೈಬರ್ ವಂಚನೆ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಗಳಿಗೆ ಸಹಕರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್, ರಾಣೆಬೆನ್ನೂರು ನಗರಾಧ್ಯಕ್ಷ ಜಿಬ್ರಾನ್ ಹಾಗೂ ಸದಸ್ಯ ಅಬ್ರಾರ್ ಜೂತೆಗಿದ್ದರು.