- ಗ್ರಾಹಕರಿಂದ 27 ರೂ. ಸಂಗ್ರಹ, ಉಳಿದ 33 ರೂ. ಸರ್ಕಾರದಿಂದ ಸಬ್ಸಿಡಿ
- ಹೊಸದಾಗಿ ನಿರ್ಮಾಣವಾಗುವ ಕ್ಯಾಂಟೀನ್ಗಳಲ್ಲಿ ಹೊಸ ದರ ಅನ್ವಯ
ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಿದ್ದು, ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ.
ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
“ಇಂದಿರಾ ಕ್ಯಾಂಟೀನ್ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಈ ಹೊಸ ದರ ಇರಲಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳಲ್ಲಿ ಹಳೇ ದರ ಮುಂದುವರಿಕೆ ಆಗಲಿದೆ” ಎಂದು ತಿಳಿಸಿದರು.
“ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲು ಒಪ್ಪಿಗೆ ನೀಡಲಾಗಿದೆ. ಹೊಸ ಇಂದಿರಾ ಕ್ಯಾಂಟೀನ್ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ” ಎಂದರು.