ಜಾರ್ಖಂಡ್‌ | ಆ್ಯಂಬುಲೆನ್ಸ್‌ ಸಿಗದೆ ಅನಾರೋಗ್ಯ ಪೀಡಿತ ಪತ್ನಿಯನ್ನು ಹೊತ್ತುಕೊಂಡು ನಡೆದ ವ್ಯಕ್ತಿ

Date:

Advertisements

ಅಗತ್ಯದ ಸಮಯದಲ್ಲಿ ಆಸ್ಪತ್ರೆಯವರು ಆ್ಯಂಬುಲೆನ್ಸ್‌ ಒದಗಿಸದ ಕಾರಣ, ವ್ಯಕ್ತಿಯೊಬ್ಬರು ತನ್ನ ಅನಾರೋಗ್ಯ ಪೀಡಿತ ಪತ್ನಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಮನೆಗೆ ಹೋಗಿರುವ ಮನಕಲಕುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಜಾರ್ಖಂಡ್‌ನ ಜಮ್ಶೆಡ್‌ಪುರ ಜಿಲ್ಲೆಯ ಧಲ್ಭುಮ್‌ಗಢ ಸಮುದಾಯ ಆರೋಗ್ಯ ಕೇಂದ್ರದಲ್ಲಿ (ಸಿಎಚ್‌ಸಿ) ಆ್ಯಂಬುಲೆನ್ಸ್‌ ಲಭ್ಯವಾಗದ ಕಾರಣ ಈ ಘಟನೆ ನಡೆದಿದೆ. ಧಲ್ಬುಮ್‌ಗಢದ ಸಮೀಪದ ಹಳ್ಳಿಯ ನಿವಾಸಿ, ಬುಡಕಟ್ಟು ಸಮುದಾಯದ ಶುಕುಲ್ಮಣಿ ಸಬರ್ ಎಂಬವರು ತಮ್ಮ ಪತ್ನಿಯನ್ನು ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಅಲ್ಲಿನ ವೈದ್ಯರು ಉತ್ತಮ ಚಿಕಿತ್ಸೆಗಾಗಿ ಜೆಮ್ಶೆಡ್‌ಪುರದ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ.

ಆದರೆ, ಜೆಮ್ಶೆಡ್‌ಪುರಕ್ಕೆ ತೆರಳಲು 108 ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಇನ್ನಾವುದೇ ಪರ್ಯಾಯ ವ್ಯವಸ್ಥೆಗಳನ್ನು ಆರೋಗ್ಯ ಕೇಂದ್ರದವರು ಒದಗಿಸಿಗಿಲ್ಲ. ಪರಿಣಾಮವಾಗಿ, ಶುಕುಲ್ಮಣಿ ಅವರು ತನ್ನ ಪತ್ನಿಯನ್ನು ಭುಜದ ಮೇಲೆ ಹೊತ್ತುಕೊಂಡು ಮನೆಗೆ ಹೊರಟಿದ್ದಾರೆ.

ಘಟನೆಯ ಬಗ್ಗೆ ಆರೋಗ್ಯ ಅಧಿಕಾರಿಗಳ ಗಮನಕ್ಕೆ ಬಂದ ಬಳಿಕ, ಶುಕುಲ್ಮಣಿ ಅವರ ಗ್ರಾಮಕ್ಕೆ ಆ್ಯಂಬುಲೆನ್ಸ್‌ ಕಳಿಸಲಾಗಿದ್ದು, ಅನಾರೋಗ್ಯಕ್ಕೆ ತುತ್ತಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲು ಮುಂದಾಗಿದ್ದಾರೆ. ಆದರೆ, ದಂಪತಿಗಳು ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

“ನಮ್ಮ ಗಮನಕ್ಕೆ ಬಂದ ತಕ್ಷಣ ನಾವು ಆ್ಯಂಬುಲೆನ್ಸ್‌ ವ್ಯವಸ್ಥೆ ಒದಗಿಸಿದ್ದೇವೆ. ಆದರೆ, ಅವರು ಆಸ್ಪತ್ರೆಗೆ ಹೋಗಲು ಹಿಂಜರಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ಒದಗಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಆದೆರ, ಅವರು ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ” ಎಂದು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ, ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಸಿಎಚ್‌ಸಿ ಸಿಬ್ಬಂದಿಯಿಂದ ವಿವರಣೆ ಕೇಳಲಾಗಿದೆ ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

ಅಮೆರಿಕ: ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ....

Download Eedina App Android / iOS

X