ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

Date:

Advertisements


ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ. ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ, ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ನಮ್ಮ ಸಮುದಾಯದ ಒಗ್ಗಟ್ಟಿನಲ್ಲಿ ಬಲವಿದೆ. ವಿಘಟನೆಯಲ್ಲಿ ಸೋಲಿದೆ. ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ, ನಮ್ಮ ಆಚಾರ-ವಿಚಾರವನ್ನು ಗೌರವಿಸಿ ಸಿಖ್, ಪಾರ್ಸಿ, ಜೈನಿರಿಗೆ ನೀಡಿರುವಂತೆ ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ವೀರಶೈವ-ಲಿಂಗಾಯತ ಧರ್ಮಕ್ಕೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸ್ವಾತಂತ್ರ್ಯಪೂರ್ವದಿಂದ ವಿಶೇಷವಾಗಿ 2000 ಇಸವಿಯಲ್ಲಿ ನಡೆದ ಜನಗಣತಿಯಿಂದಲೂ ಪ್ರತಿಪಾದಿಸುತ್ತಾ ಬಂದಿದೆ. ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ” ಎಂದರು.

“ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ ಪಂಚಾಚಾರ ಷಟಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವಾಗಿದೆ” ಎಂದು ತಿಳಿಸಿದರು.

“ಪ್ರತ್ಯೇಕ ಧರ್ಮದ ವಿಚಾರಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನ ಸಮುದಾಯದ ನಾಯಕರಾಗಿದ್ದಾರೆ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಬಸವಾದಿ ಶರಣರು ಸಮಸಮಾಜದ ಭವ್ಯ ಕನಸು ಕಂಡಿದ್ದರು. ಅದನ್ನೇ ಮುಖ್ಯಮಂತ್ರಿಗಳು ಪಾಲಿಸುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸಲು ಶ್ರಮಿಸುತ್ತಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂವನ್ನು ಅವರು ಗೌರವಿಸುತ್ತಾರೆ. ಬಸವತತ್ವ ಸಾರ್ವಕಾಲಿಕ ಸತ್ಯವಾಗಿದೆ. ಹಿಂದೆ, ಇಂದು ಮತ್ತು ಮುಂದೆಯೂ ಇದು ಜಗತ್ತಿಗೆ ಮಾರ್ಗದರ್ಶನ ಮಾಡುತ್ತದೆ” ಎಂದರು.

ನವೆಂಬರ್ ಕ್ರಾಂತಿ ಮಾಧ್ಯಮಗಳ ಚರ್ಚೆಯ ವಸ್ತು ಅಷ್ಟೇ. ಪಕ್ಷದ ಹಂತದಲ್ಲಿ ಈ ಚರ್ಚೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಈಶ್ವರ ಖಂಡ್ರೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ...

Download Eedina App Android / iOS

X