ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

Date:

Advertisements

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ) ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನೆರವೇರಿತು.

ಕಾರ್ಖಾನೆಗೆ ಶೇ.69ರಷ್ಟು ಮತದಾನವಾಗಿದೆ. ಒಟ್ಟು 4,452 ರೈತ ಮತದಾರರು ಹೊಂದಿದ್ದು ಅದರಲ್ಲಿ 3,106 ರೈತರು ತಮ್ಮ ಹಕ್ಕು ಚಲಾಯಿಸಿದ್ದರು.  ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಂಡ ಮತದಾನ ಸಾಯಂಕಾಲ 4 ಗಂಟೆ ವರೆಗೂ ನಡೆಯಿತು. 

ಬೆಳಿಗ್ಗೆ 11 ಗಂಟೆ ವರೆಗೂ ನೀರಸವಾಗಿದ್ದ ಮತದಾನ ಮಧ್ಯಾಹ್ನ 12 ಗಂಟೆ ನAತರ ಬಿರುಸು ಪಡೆದು ಕೊಂಡಿತು. ರೈತರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದ ದೃಶ್ಯ ಕಂಡು ಬಂತು.  ಒಟ್ಟು 13 ನಿರ್ದೇಶಕರ ಸ್ಥಾನಗಳ ಪೈಕಿ 5 ಸ್ಥಾನಗಳು ಅವಿರೋಧ ಆಯ್ಕೆಗೊಂಡ ಹಿನ್ನೆಲೆಯಲ್ಲಿ 8 ಸ್ಥಾನಗಳಿಗೆ ಚುನಾವಣೆ ನಡೆಯಿತು.

ಸಾಮಾನ್ಯ ಕ್ಷೇತ್ರ 5, ಸಾಮಾನ್ಯ ಮಹಿಳಾ ಕ್ಷೇತ್ರ 2  ಮತ್ತು ಪರಿಶಿಷ್ಟ ಜಾತಿ 1 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದರು. ಪ್ರತಿ ಬಾರಿ ಅವಿರೋಧ ಆಯ್ಕೆ ನಡೆಯುತ್ತಿದ್ದ ಕಾರ್ಖಾನೆಗೆ ಈ ಬಾರಿ ಬಿಜೆಪಿ ಬೆಂಬಲಿತರು ಸ್ಪರ್ಧೆ ಮಾಡಿದ್ದರಿಂದ ಚುನಾವಣಾ ಕಣ ರಂಗೇರಿತು. ಹಾಗಾಗಿ 8 ಸ್ಥಾನಗಳಲ್ಲಿ ಅಮರಕುಮಾರ ಖಂಡ್ರೆ ಪೆನಾಲ್ ಮತ್ತು ಬಿಜೆಪಿ
ಬೆಂಬಲಿತರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತು.

ಇದನ್ನೂ ಓದಿ : ಬೀದರ್‌ | ರಸ್ತೆ ಗುಂಡಿಗಳಿಗೆ ಹೂವು ಸುರಿಸಿ ವಿನೂತನ ಪ್ರತಿಭಟನೆ ನಡೆಸಿದ ಕೆಆರ್‌ಎಸ್‌ ಪಕ್ಷ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ...

Download Eedina App Android / iOS

X