ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನದ ಪ್ರಯುಕ್ತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಪುನಾರಚನೆ ಮಾಡಿದ್ದು, ರಾಜ್ಯದಿಂದ ರಾಜ್ಯಸಭಾ ಸದಸ್ಯರಾದ ಸಯ್ಯದ್ ನಾಸೀರ್ ಹುಸೇನ್ ಅವರು ಸ್ಥಾನ ಪಡೆದಿದ್ದಾರೆ.
ಹಾಗೆಯೇ ಕರ್ನಾಟಕದ ಮೂಲದವರಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಸ್ಥಾನದಲ್ಲಿ ಬದಲಾವಣೆಯಾಗಿಲ್ಲ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಶಾಶ್ವತ ಆಹ್ವಾನಿತರಲ್ಲಿ ಸ್ಥಾನ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಲಡಾಕ್‌ನಲ್ಲಿ 130 ಕಿಮೀ ಬೈಕ್ ಸವಾರಿ ಮಾಡಿದ ರಾಹುಲ್ ಗಾಂಧಿ; ಈ ವಾರ ಕಾರ್ಗಿಲ್‌ಗೆ ಭೇಟಿ
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ರಾಜಸ್ಥಾನದ ನಾಯಕ ಸಚಿನ್ ಪೈಲಟ್ ಸ್ಥಾನ ಪಡೆದಿದ್ದಾರೆ. ಹೊಸದಾಗಿ ಸ್ಥಾನ ಪಡೆದವರಲ್ಲಿ ಶಶಿ ತರೂರ್, ದೀಪಾ ದಾಸ್ ಮುನ್ಷಿ ಮತ್ತು ಕರ್ನಾಟಕದ ಸೈಯದ್ ನಾಸರ್ ಹುಸೇನ್ ಕೂಡ ಸೇರಿದ್ದಾರೆ. ಸಚಿನ್ ಪೈಲಟ್ ಅವರನ್ನು ದೊಡ್ಡ ರಾಜ್ಯದ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
2020 ರಲ್ಲಿ ಪಕ್ಷದಲ್ಲಿ ಸುಧಾರಣೆಗೆ ಒತ್ತಾಯಿಸಿ ಜಿ-23 ಗುಂಪು ಬರೆದ ಪತ್ರಕ್ಕೆ ಸಹಿ ಹಾಕಿದ ಆನಂದ್ ಶರ್ಮಾ ಅವರು ಪಕ್ಷದ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕಾರ್ಯಕಾರಿ ಸಮಿತಿಯ ಒಟ್ಟು 39 ಸದಸ್ಯರಲ್ಲಿ ಸಚಿನ್ ಪೈಲಟ್, ಗೌರವ್ ಗೊಗೊಯ್ ಮತ್ತು ಕಮಲೇಶ್ವರ್ ಪಟೇಲ್ ಮಾತ್ರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸದಸ್ಯರಾಗಿದ್ದಾರೆ.
ಎಲ್ಲ ಸಿಡಬ್ಲ್ಯೂಸಿ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಸಮಿತಿ ಫೆಬ್ರವರಿಯಲ್ಲಿ ತಿಳಿಸಿತ್ತು.