ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನೇತೃತ್ವದ ನಿಯೋಗ ಆಗಸ್ಟ್ 22 ರಂದು ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಅವರನ್ನು ಭೇಟಿ ಮಾಡಲು ಸಮಯ ನಿಗದಿಯಾಗಿದೆ ಎಂದು ಹೋರಾಟ ಸಮಿತಿ ಸಂಚಾಲಕ ಅಶೋಕ ಕುಮಾರ ಜೈನ್ ಹೇಳಿದರು.
ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಕೇಂದ್ರ ಆರೋಗ್ಯ ಸಚಿವರು ಅಂದು ಮಧ್ಯಾಹ್ನ 2 ಗಂಟೆಗೆ ಭೇಟಿಯ ಸಮಯ ನೀಡಿದ್ದಾರೆ. ಜಿಲ್ಲೆಯ ಸಚಿವರುಗಳಾದ ಡಾ.ಶರಣಪ್ರಕಾಶ ಪಾಟೀಲ್, ಸಣ್ಣನೀರಾವರಿ ಸಚಿವ ಎನ್ ಎಸ್ ಬೋಸರಾಜು ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ನಿಯೋಗದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಆಶ್ರಯ ಯೋಜನೆ ಜಮೀನು ಒತ್ತುವರಿ; 4 ಎಕರೆ ಸರ್ಕಾರಿ ಭೂಮಿ ಮರುವಶ
“ಹೋರಾಟ ಸಮಿತಿಯಿಂದಲೂ ಇಬ್ಬರು ಭಾಗವಹಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ ಸೇರಿ ಅನೇಕ ಸಂಸದರು ಭಾಗವಹಿಸುವ ಸಾಧ್ಯತೆಗಳಿವೆ. ಜಿಲ್ಲೆಗೆ ಏಮ್ಸ್ ಮಂಜೂರಾತಿ ಅವಶ್ಯಕತೆ ಕುರಿತಾಗಿ ಕೇಂದ್ರಕ್ಕೆ ಮನವರಿಕೆ ಮಾಡಲಾಗುತ್ತದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಜಾನ್‌ವೆಸ್ಲಿ, ಎಸ್ ಎಸ್ ಪಾಟೀಲ್, ಎನ್ ಮಹಾವೀರ, ಕಾಮರಾಜ ಪಾಟೀಲ್ ಇದ್ದರು.