ಕರ್ನಾಟಕ – ತಮಿಳುನಾಡು ಕಾವೇರಿ ನದಿ ವಿವಾದ: ನೀರು ಹಂಚಿಕೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

Date:

Advertisements

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಇಂದು(ಆಗಸ್ಟ್‌ 21) ಒಪ್ಪಿಗೆ ನೀಡಿದೆ.

ಸುಪ್ರೀಂ ಕೋರ್ಟ್​ನಲ್ಲಿ ಸಿಜೆಐ ಪೀಠದ ಮುಂದೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು ಕರ್ನಾಟಕಕ್ಕೆ ಕಾವೇರಿ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿದ್ದಾರೆ. ಆಗಸ್ಟ್‌ 21ರಂದೇ ಪೀಠ ರಚನೆಯಾಗಲಿದ್ದು, ವಿಚಾರಣೆ ಕೂಡ ಇಂದೇ ಆರಂಭವಾಗಲಿದೆ ಎಂದು ಹೇಳಲಾಗಿದೆ.

Advertisements

ಮುಖ್ಯ ನ್ಯಾಯಮೂರ್ತಿ ಪೀಠದ ಮುಂದೆ ತಮಿಳುನಾಡು ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಹಾಗೂ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಅಮಿತ್‌ ಆನಂದ್‌ ತಿವಾರಿ ಅವರು ತುರ್ತು ಮನವಿಯ ಅರ್ಜಿಯನ್ನು ಪ್ರಸ್ತಾಪಿಸಿದ್ದಾರೆ.

“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ಆಗಸ್ಟ್‌ ತಿಂಗಳಲ್ಲಿ ನೀರನ್ನು ಬಿಡುಗಡೆ ಮಾಡಲು ಇದು ತುರ್ತು ಮನವಿಯಾಗಿದೆ. ನಿಮ್ಮ ನೇತೃತ್ವದಲ್ಲಿ ನ್ಯಾಯ ಪೀಠವನ್ನು ರಚಿಸಬೇಕು” ಎಂದು ಮುಕುಲ್ ರೋಹಟಗಿ ಮನವಿಯಲ್ಲಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಹಗರಣ: ಸಿಬಿಐ ತನಿಖೆಗೆ ವಹಿಸಿದ ಕೇಂದ್ರ

“ಇಂದೇ ನಾನು ಪೀಠವನ್ನು ರಚಿಸುತ್ತೇನೆ” ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪ್ರತಿಕ್ರಿಯಿಸಿದರು. ರೋಹಟಗಿ ಅವರು ಕೂಡ ಪ್ರಕರಣವನ್ನು ಶೀಘ್ರವಾಗಿ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಾಧೀಶರನ್ನು ಒತ್ತಾಯಿಸಿದರು.

ಆಗಸ್ಟ್ 14 ರಿಂದ ಪ್ರಾರಂಭವಾಗುವ ಉಳಿದ ತಿಂಗಳ ಅವಧಿಗೆ ಬಿಳಿಗುಂಡ್ಲು ಜಲಾಶಯದಿಂದ 24,000 ಕ್ಯೂಸೆಕ್ಸ್ ಕಾವೇರಿ ನೀರನ್ನು ತಕ್ಷಣವೇ ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

2018 ರಲ್ಲಿ ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ನ್ಯಾಯಮಂಡಳಿ ತೀರ್ಪು ಪ್ರಕಾರ 2023 ಸೆಪ್ಟೆಂಬರ್ ತಿಂಗಳಿಗೆ (36.76 ಟಿಎಂಸಿ) ನಿಗದಿತ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶಿಸುವಂತೆ ತಮಿಳುನಾಡು ಸರ್ಕಾರ ನ್ಯಾಯಾಲಯವನ್ನು ಒತ್ತಾಯಿಸಿದೆ.

ಪ್ರಸಕ್ತ ನೀರಾವರಿ ವರ್ಷದಲ್ಲಿ ಜೂನ್ 1 ರಿಂದ ಜುಲೈ 31 ರವರೆಗಿನ ಅವಧಿಯಲ್ಲಿ ಕರ್ನಾಟಕವು 28.849 ಟಿಎಂಸಿ ನೀರಿನ ಕೊರತೆಯನ್ನು ಸರಿದೂಗಿಸಬೇಕು ಎಂದು ತಮಿಳುನಾಡು ಹೇಳಿದೆ.

ಕಾವೇರಿ ಜಲ ವಿವಾದದಲ್ಲಿ ಈ ಮನವಿಯನ್ನು ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್ ಅನ್ನು ಆಗ್ರಹಿಸಿದ ರೋಹಟಗಿ, ತಪ್ಪಲು ಜಿಲ್ಲೆಗಳಲ್ಲಿ ಬೆಳೆದು ನಿಂತ ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯತೆ ಇದೆ ಎಂದು ತಮ್ಮ ವಾದದಲ್ಲಿ ತಿಳಿಸಿದ್ದಾರೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘಿಸಲಾಗಿದ್ದು, ಕರ್ನಾಟಕವು ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಬಿಳಿಗುಂಡ್ಲುವಿನಲ್ಲಿ 2023 ಆಗಸ್ಟ್ 11ರಂದು ಮುಂದಿನ 15 ದಿನಗಳಲ್ಲಿ ಬಿಡುಗಡೆ ಮಾಡಬೇಕಾಗಿದ್ದ ನೀರಿನ ಪ್ರಮಾಣವನ್ನು 15 ಸಾವಿರ ಕ್ಯೂಸೆಕ್ಸ್ (ಪ್ರತಿದಿನ 0.864 ಟಿಎಂಸಿ)ನಿಂದ 10 ಸಾವಿರ ಕ್ಯೂಸೆಕ್ಸ್‌ಗೆ ಇಳಿಕೆ ಮಾಡಿದೆ ಎಂದು ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X