- ಸೋಮವಾರ ಸಂಜೆ ಕಾಂಗ್ರೆಸ್ ಸೇರಲಿರುವ ಜೆಡಿಎಸ್, ಬಿಜೆಪಿ ಮುಖಂಡರು
- ಕುತೂಹಲ ಮೂಡಿಸಿರುವ ಡಿಕೆ ಶಿವಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ
ಸೋಮವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಆಯನೂರು ಮಂಜುನಾಥ್, ಶಿಕಾರಿಪುರ ನಾಗರಾಜ್ ಗೌಡ ಅಧಿಕೃತವಾಗಿ ಕೈ ಹಿಡಿಯಲಿದ್ದಾರೆ.
‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸಹಜವಾಗಿ ‘ಆಪರೇಷನ್ ಹಸ್ತ’ದ ಲೇಪ ಪಡೆದಿದೆ. ಅಧಿಕೃತವಾಗಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕಾಂಗ್ರೆಸ್ ಸೇರುವುದಾಗಿ ಎಲ್ಲೂ ಹೇಳಿಕೊಂಡಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು
ಹಾಗೆಯೇ ‘ಆಪರೇಷನ್ ಹಸ್ತ’ದಲ್ಲಿ ಭಾರೀ ಸುದ್ದಿಯಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.