ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಕೆರೆಯಲ್ಲಿ ಭಾನುವಾರ ನೂರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ.
ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಓಡಾಡುತ್ತಿರುವಾಗ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಚಿಕ್ಕನಾಗಮಂಗಲದಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕದಿಂದ ಕಲುಷಿತಗೊಂಡಿರುವ ನೀರು ಕೆರೆಗೆ ಹರಿದು ಬರುತ್ತಿದೆ. ಈ ಚಿಕ್ಕನಾಗಮಂಗಲ ಕೆರೆಯಲ್ಲಿ ಮೀನುಗಳು ಸಾಯುತ್ತಿರುವುದು ಇದೇ ಮೊದಲು ಎಂದು ಸ್ಥಳೀಯರು ಹೇಳಿದ್ದಾರೆ.
ಸ್ಥಳೀಯ ನಿವಾಸಿ ಪ್ರಣಯ್ ದುಬೆ ಮಾತನಾಡಿ, “ಕಲುಷಿತ ನೀರನ್ನು ಕರೆಗೆ ಬಿಡಲಾಗುತ್ತಿದೆ. ಇದು ಮಾಲಿನ್ಯಕ್ಕೆ ಕಾರಣವಾಗಿದೆ. ಇದರ ಪರಿಣಾಮವಾಗಿ ಮೀನುಗಳು ಸಾಯುತ್ತಿವೆ” ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ
“ಕೆರೆಯಲ್ಲಿ ಉಂಟಾಗುತ್ತಿರುವ ಮಾಲಿನ್ಯದ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಯಾವುದೇ ದೂರುಗಳು ಬಂದಿಲ್ಲ. ಸ್ಥಳೀಯ ನಿವಾಸಿಗಳು ತ್ಯಾಜ್ಯ ನಿರ್ವಹಣಾ ಘಟಕವನ್ನು ಮುಚ್ಚಲು ಬಯಸುತ್ತಾರೆ. ಪರಿಸರಕ್ಕೆ ಸಂಬಂಧಿಸಿದ ಯಾವುದಾದರೂ ಪ್ರದೇಶದಲ್ಲಿ ಅವಘಡ ಸಂಭವಿಸಿದರೆ ಅದಕ್ಕೆ ಘಟಕವನ್ನು ದೂಷಿಸುತ್ತಾರೆ. ಸ್ಥಾವರವನ್ನು ಮುಚ್ಚಲು ಸಾಧ್ಯವಿಲ್ಲ” ಎಂದು ಬಿಡಬ್ಲೂಎಸ್‌ಎಸ್‌ಬಿ ಅಧಿಕಾರಿಯೊಬ್ಬರು ಹೇಳಿದರು.