ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್‌ಗೆ ಸೇರ್ಪಡೆ

Date:

Advertisements

ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರ ಬೆಂಬಲಿಗರು ಬಿಜೆಪಿ ತೊರೆದು ಸೋಮವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಮೂಲಕ ಆಪರೇಷನ್ ಹಸ್ತ ಆರಂಭವಾಗಿದ್ದು, ಮೊದಲ ಹಂತವಾಗಿ ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Advertisements

ಈ ವೇಳೆ ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

“ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡುತ್ತೇವೆ” ಎಂದು ಮಾಜಿ ಪಾಲಿಕೆ ಸದಸ್ಯ ರಾಜಣ್ಣ ಹೇಳಿದರು.

ಸೋಮಶೇಖರ್ ಹೆಸರು ಹೇಳದಂತೆ ಶಾಸಕ ಶ್ರೀನಿವಾಸ್ ಅವರು ತಡೆದ ಪ್ರಸಂಗ ನಡೆಯಿತು. ಕೂಡಲೇ ಮಾತು‌ ಬದಲಾಯಿಸಿದ ಅವರು, “ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು. 2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ‌ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ” ಎಂದು ಹೇಳಿದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X