ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ ಮಂಟೇ ಲಿಂಗಯ್ಯ ಅವರು ಹೃದಯಾಘಾತದಿಂದ ಮೈಸೂರಿನಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ. ನಗರದ ಕೆಸರೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮಂಗಳವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಜನಪರ ಕಾಳಜಿ ಹೊಂದಿದ್ದ ಮಂಟೇ ಲಿಂಗಯ್ಯ ಅವರು ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಎಜೆಎಂಎಸ್ ಎಂಬ ಸಂಘಟನೆ ಕಟ್ಟಿದ್ದದರು. ಮೈಸೂರು ದಸರಾಕ್ಕೆ ಪ್ರತಿಯಾಗಿ ಬಡವರ ದಸರಾ ನಡೆಸಿ, ರಾಜ್ಯ ಮತ್ತು ಸರ್ಕಾರದ ಗಮನ ಸೆಳೆದಿದ್ದರು.
ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡಿದ್ದ ಅವರು ರಾಜ್ಯದ ಹಲವಾರು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅಂಬೇಡ್ಕರ್ ವಿಚಾರಧಾರೆ ಜೊತೆಗೆ ಪ್ರಗತಿಪರ ಚಿಂತನೆಯ ಕಿಚ್ಚು ಹಚ್ಚಿದ್ದರು. ಹಿಂದು ಧರ್ಮದಲ್ಲಿನ ಮೌಢ್ಯದ ವಿರುದ್ಧವೂ ಹೋರಾಟ ನಡೆಸಿದ್ದರು. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.