ರಾಜ್ಯದಲ್ಲಿ ಸೋನಿಯಾ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ತರುತ್ತಿದ್ದೀರಾ? ಬಿ ಸಿ ನಾಗೇಶ್‌ ಕಿಡಿ

Date:

Advertisements
  • ಎನ್‌ಇಪಿ ಅನ್ನು ‘ನಾಗಪುರ ಶಿಕ್ಷಣ ನೀತಿ’ ಎಂದಿದ್ದ ಕಾಂಗ್ರೆಸ್‌
  • ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪ್ರಶ್ನೆ ಮುಂದಿಟ್ಟ ನಾಗೇಶ್

ಎನ್‌ಇಪಿಯನ್ನು ಅನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ (ಸೋನಿಯಾ ಶಿಕ್ಷಣ ನೀತಿ)ಯನ್ನು ಜಾರಿಗೆ ತರುತ್ತಿದ್ದೀರಾ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಕುಟುಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿ, ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ರದ್ದುಗೊಳಿಸಿ, ಕಡಿಮೆ ಸಮಯದಲ್ಲಿ ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿಯನ್ನು ತರಲು ಪ್ಲಾನ್ ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುವೆ ಎಂದು ಹೇಳಿದ್ದಾರೆ.

ಬಿ ಸಿ ನಾಗೇಶ್‌ ಪ್ರಶ್ನೆಗಳು

Advertisements

ಬಡವ, ಶ್ರೀಮಂತ ಎನ್ನದೇ ಸರ್ವರಿಗೂ ಕೌಶಲ್ಯ ಆಧಾರಿತ, ‘ಸಮಾನ ಗುಣಮಟ್ಟ’ದ ಶಿಕ್ಷಣ ನೀಡುವ ಅಂಶಗಳನ್ನು ಎನ್‌ಇಪಿ ಒಳಗೊಂಡಿದೆ. ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಬಾರದೇ? ಸಮಾನ ಶಿಕ್ಷಣ ನೀಡಿದರೆ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಬಾಗಿಲು ಹಾಕಬೇಕಾಗಬಹುದು ಎಂಬ ಆತಂಕವೇ?

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಎನ್ಇಪಿ ರೂಪಿಸಲಾಗಿದೆ ಎಂಬ ತಮ್ಮ ಹೇಳಿಕೆಯು ಅತ್ಯಂತ ಬೇಜವಾಬ್ದಾರಿಯುತ ಹಾಗೂ ರಾಜಕೀಯ ಪ್ರೇರಿತ ಹೇಳಿಕೆಯಾಗಿದೆ. ಅಸಲಿಗೆ ರಾಜ್ಯದ ಡಿಎಸ್‌ಇಆರ್‌ಟಿ, ಅನೇಕ ಶಿಕ್ಷಣ ತಜ್ಞರು, ಕುಲಪತಿಗಳು, ಪಾಲಕರು, ಮಕ್ಕಳ ವೈದ್ಯರು, ತಜ್ಞರಿಂದ ಅಭಿಪ್ರಾಯವನ್ನು ಸಂಗ್ರಹಿಸಿ ಸುದೀರ್ಘ ಸಮಾಲೋಚನೆ ನಡೆಸಿ ಎನ್‌ಇಪಿಯನ್ನು ರೂಪಿಸಲಾಗಿದೆ ಎಂಬುದನ್ನು ನಾನು ಸಾಬೀತುಪಡಿಸುತ್ತೇನೆ. ಸವಾಲು ಸ್ವೀಕರಿಸುವಿರಾ?

ವಿಜ್ಞಾನಿಗಳು, ಶಿಕ್ಷಣ ತಜ್ಞರು, ಮಕ್ಕಳ ತಜ್ಞರು, ಶಿಕ್ಷಕ ಸಮುದಾಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚಿಸಿ ಹತ್ತು ವರ್ಷ ಕಾಲ ಅಧ್ಯಯನ ನಡೆಸಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದುಗೊಳಿಸಲು ಕಾರಣವೇನು? ಅದರಲ್ಲಿರುವ ಲೋಪ – ದೋಷಗಳು ಏನು ಎಂಬುದನ್ನು ಅಧಿಕೃತ ದಾಖಲೆಗಳ ಮೂಲಕ ರಾಜ್ಯದ ಜನರಿಗೆ ತಿಳಿಸುವಿರಾ?

ಎನ್‌ಇಪಿಯಲ್ಲಿ ಆಯಾ ರಾಜ್ಯಗಳ ಭಾಷೆ/ ಮಾತೃ ಭಾಷೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲೂ ಇಂಗ್ಲೀಷೇತರ ಭಾಷೆಯಲ್ಲಿ ಕಲಿತು ಪದವಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಎನ್‌ಇಪಿಯಲ್ಲಿ ಈ ರೀತಿ ವೈವಿಧ್ಯಮಯ ಕಲಿಕೆಗೆ ಅವಕಾಶ ಕಲ್ಪಿಸಿರುವುದರಿಂದ ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ನೀಡುತ್ತಿರುವ ಇಂಗ್ಲೀಷ್ ಶಿಕ್ಷಣಕ್ಕೆ ಧಕ್ಕೆಯಾಗುತ್ತದೆ ಎಂಬ ಭಯ ಕಾಡುತ್ತಿದೆಯೇ?

ಸಿಬಿಎಸ್ಇ ಶಾಲೆಗಳಲ್ಲಿ ಈಗಾಗಲೇ ಎನ್‌ಇಪಿ ಅನುಷ್ಠಾನವಾಗಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ಹಾಗೂ ಇನ್ನಿತರ ಬಲಾಢ್ಯ ರಾಜಕಾರಣಿಗಳ ಒಡೆತನದಲ್ಲಿರುವ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳಲ್ಲಿನ ಎನ್‌ಇಪಿ ಆಧಾರಿತ ಸಿಬಿಎಸ್‌ಇ ಪಠ್ಯಕ್ರಮದ ಬದಲು ಉದ್ದೇಶಿತ ರಾಜ್ಯ ಶಿಕ್ಷಣ ನೀತಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಾಗುವುದೇ?

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X