ಚುನಾವಣಾ ರಾಜಕೀಯಕ್ಕೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ನಿವೃತ್ತಿ ಘೋಷಣೆ

Date:

Advertisements

ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಅವರು ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ʼʼಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿರುವೆ” ಎಂದು ಬಿ ಎನ್ ಬಚ್ಚೇಗೌಡ ಹೇಳಿದರು.

ʼʼರಾಜ್ಯ ಸರ್ಕಾರ ಹಣ ನೀಡುತ್ತೇವೆ ಎಂದರೂ ಅಕ್ಕಿ ನೀಡದಿರುವುದು ತಪ್ಪು. ನಾನು ರಾಜ್ಯದ ಸಂಸದನಾಗಿ ಹೇಳುತ್ತಿದ್ದೇನೆ. ಅಕ್ಕಿ ಕೊಡದಿರುವುದು ತಪ್ಪು. ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡದೆ ಅನ್ಯಾಯ ಮಾಡಿದೆʼʼ ಎಂದು ಇದೇ ವೇಳೆ ಬಿ ಎನ್ ಬಚ್ಚೇಗೌಡ ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಏರುತ್ತಿರುವ ರಾಹುಲ್ ಜನಪ್ರಿಯತೆಗೆ ಮೋದಿ ಆತಂಕಗೊಂಡಿದ್ದಾರೆಯೇ? ಅಂಕಿ-ಅಂಶ ಏನು ಹೇಳುತ್ತದೆ?

‘ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಸಚಿವರ ಕಾರ್ಯ ವೈಖರಿ ಹಾಗೂ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಈ ಹಿಂದಿನ ವಿದಾನಸಭಾ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಾಗಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದಿನ ರಾಜ್ಯದ ಬಿಜೆಪಿ ಸರ್ಕಾರ ಮತ್ತು ಪಕ್ಷ ನನಗೆ ಯಾವುದೇ ರೀತಿಯಲ್ಲಿ ವಿಶ್ವಾಸ ಹಾಗೂ ಪ್ರತಿನಿದ್ಯ ನೀಡದೆ ಸಚಿವರುಗಳ ಕಾರ್ಯವೈಖರಿ ಹಾಗೂ ನನ್ನನ್ನು ನಿರ್ಲಕ್ಷಿಸಿದ ಕಾರಣ ಚುನಾವಣೆಗಳಿಂದ ನಾನು ಹಿಂದೆ ಸರಿಯುವಂತಾಯಿತು. ಮುಂದಿನ ದಿನಗಳಲ್ಲಿಯೂ ಸಕ್ರಿಯ ರಾಜಕಾರಣದಲ್ಲಿ ನಾನು ಮುಂದುವರೆಯಲಾರೆ ಎಂದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮವಾದ ಬಜೆಟ್‌ ನ್ನು ಮಂಡಿಸಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X