ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವಾಲಯ

Date:

Advertisements

ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ನೂತನ ನೀತಿಯ ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು ಸಿದ್ಧವಾಗಿದೆ ಮತ್ತು 2024ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಎನ್‌ಇಪಿಯ ನೂತನ ನೀತಿಯ ಪ್ರಕಾರ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಎರಡು ಭಾಷೆಗಳನ್ನು ಅಧ್ಯಯನ ಮಾಡಬೇಕು. ಅವುಗಳಲ್ಲಿ ಒಂದು ಭಾರತೀಯ ಭಾಷೆಯಾಗಬೇಕು. ಈ ವಿಧಾನವು ಭಾಷಾ ವೈವಿಧ್ಯತೆ ಮತ್ತು ದೇಶದ ಸಾಂಸ್ಕೃತಿಕತೆಯನ್ನು ಒತ್ತಿಹೇಳುತ್ತದೆ ಎಂದು ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? 6,366 ಕೋಟಿ ರೂ. ನರೇಗಾ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

ಕಂಠಪಾಠದ ಮೇಲೆ ಅವಲಂಬಿತರಾಗುವುದಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳ ತಿಳಿವಳಿಕೆ ಮತ್ತು ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೊಸ ಚೌಕಟ್ಟು ಪ್ರತಿಪಾದಿಸುತ್ತದೆ. ಈ ವಿದ್ಯಾರ್ಥಿ-ಕೇಂದ್ರಿತ ವಿಧಾನವು ವಿಷಯಗಳ ಆಳವಾದ ಗ್ರಹಿಕೆ ಮತ್ತು ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಕಲಿಯುವವರಿಗೆ ಹೆಚ್ಚಿನ ಆಯ್ಕೆ ನೀಡಲು ಪ್ರಯತ್ನಿಸುತ್ತದೆ ವರದಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಕಷ್ಟು ಸಮಯ ಮತ್ತು ಅವಕಾಶವನ್ನು ಖಚಿತಪಡಿಸಿಕೊಳ್ಳಲು ವರ್ಷಕ್ಕೆ ಕನಿಷ್ಠ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಾವು ಆಯ್ದುಕೊಂಡ ವಿಷಯಗಳನ್ನು ಸಂಪೂರ್ಣವಾಗಿ ಸಿದ್ಧರಾದ ನಂತರ ವರ್ಷದಲ್ಲಿ ಇರುವ ಎರಡು ಬೋರ್ಡ್ ಪರೀಕ್ಷೆಗಳಲ್ಲಿ ಯಾವುದಾದರೂ ಒಂದಕ್ಕೆ ಹಾಜರಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಉಳಿಸಿಕೊಳ್ಳಲು ಸಹ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ಮುಖ್ಯವಾಗಿ, ವಿಷಯಗಳನ್ನು ಆಯ್ಕೆ ಮಾಡುವ ಸೀಮಿತ ಗುರಿಯನ್ನು ವಿಸ್ತರಿಸಲಾಗುತ್ತಿದೆ. ಕಲೆ, ವಿಜ್ಞಾನ ಮತ್ತು ವಾಣಿಜ್ಯಗಳಂತ ಸಾಂಪ್ರದಾಯಿಕ ಪ್ರತ್ಯೇಕತೆಯು ಇನ್ನು ಮುಂದೆ ವಿದ್ಯಾರ್ಥಿಗಳ ಆಯ್ಕೆಗಳನ್ನು ನಿರ್ಬಂಧಿಸುವುದಿಲ್ಲ ಎಂದು ಸಚಿವಾಲಯದ ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X