ಚಿತ್ರದುರ್ಗ | ಸ್ವಚ್ಛತೆ, ನೀರು ನೈರ್ಮಲ್ಯದ ಕುರಿತು ಸಭೆ ನಡೆಸಲು ತಾಲೂಕು ಆರೋಗ್ಯಾಧಿಕಾರಿ ಸಲಹೆ

Date:

Advertisements

ಶುದ್ದವಾದ ಕುಡಿಯುವ ನೀರನ್ನು ಪೂರೈಸುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ತಿಂಗಳಿಗೊಮ್ಮೆ ಪಂಚಾಯಿತಿಗಳಲ್ಲಿ ಒಮ್ಮೆಯಾದರೂ ಸಭೆ ನಡೆಸಿ ಪರಿಸರ ಸ್ವಚ್ಛತೆ ಮತ್ತು ನೀರು ನೈರ್ಮಲ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ. ಬಿ ವಿ ಗಿರೀಶ್ ಸಲಹೆ ನೀಡಿದರು.

ಚಿತ್ರದುರ್ಗ ತಾಲೂಕು ಸಿರಿಗೆರೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, “ನೀರು ಆರೋಗ್ಯವನ್ನು ಕಾಪಾಡುತ್ತದೆ. ಸಭೆಯಲ್ಲಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ಕ್ರಿಯಾಯೋಜನೆ ರೂಪಿಸಬೇಕು. ಪಿಡಿಒಗಳು ಸಲಹೆ ಸೂಚನೆಗಳನ್ನು ಪಾಲನೆ ಮಾಡುವುದರಿಂದ ತುರ್ತು ಆರೋಗ್ಯ ಸಮಸ್ಯೆಗಳನ್ನು ಕೂಡಲೇ ನಿರ್ವಹಣೆ ಮಾಡಬಹುದು” ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್ ಎಸ್ ಮಂಜುನಾಥ್ ಮಾತನಾಡಿ, “ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ ಉದ್ದೇಶ ಜವಾಬ್ದಾರಿ ಹಾಗೂ ಕಾರ್ಯ ವಿಧಾನಗಳ ಬಗ್ಗೆ ತಿಳಿಸುತ್ತಾ, ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ವಿಲೇವಾರಿ, ಕೊಳಚೆ ನೀರು ನಿಲ್ಲಲು ಅವಕಾಶ ನೀಡಬಾರದು ಎಂಬುದರ ಬಗ್ಗೆ ಮಾಲೀಕರಿಗೆ ಅರಿವು ಮೂಡಿಸಬೇಕು. ಖಾಲಿ ನಿವೇಶನದಲ್ಲಿ ಹೇರಳವಾಗಿ ಬೆಳೆದಿರುವ ಕಳೆ ಗಿಡಗಳನ್ನು ಸ್ವಚ್ಛಗೊಳಿಸುವಂತೆ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

Advertisements

“ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಉದ್ದೇಶದಿಂದ ಜಲಮೂಲಗಳ ಸ್ವಚ್ಛತೆ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ನೀರಿನ ಸ್ಥಾವರ ಜಲಮೂಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಡಿಲು ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕು. ಕಾಲ ಕಾಲಕ್ಕೆ ಕುಡಿಯುವ ನೀರಿನ ಮೂಲಗಳಿಗೆ ಕ್ಲೋರಿನೇಷನ್ ಮಾಡಿಸಬೇಕು. ಸ್ಥಳೀಯ ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳಿಂದ ನೀರು ಕುಡಿಯಲು ಯೋಗ್ಯವಾಗಿದೆಯಾ ಎಂಬುದರ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಘನತ್ಯಾಜ್ಯ ವಸ್ತುಗಳನ್ನು ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಜಲ ವಿವಾದ | ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ : ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಮೂಗಪ್ಪ ಮಾತನಾಡಿ, ಕೈ ತೊಳೆಯುವುದು, ನೊಣಗಳಿಂದ ಆಹಾರ ಸಂರಕ್ಷಣೆ ಮಾಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ಸುನಿಲ್, ಡಾ ತಿಮ್ಮೇಗೌಡ, ಗ್ರಾ.ಪಂ.ಅಧ್ಯಕ್ಷೆ ಕೆ ಹಾಲಮ್ಮ, ಉಪಾಧ್ಯಕ್ಷೆ ಗೀತಾ ಶಿವಮೂರ್ತಿ, ಪಿಡಿಒ ಹನ್ಸಿರಾ ಬಾನು, ಎ.ರಾಮಕೃಷ್ಣಪ್ಪ, ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

Download Eedina App Android / iOS

X