ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.
ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಕೊಪ್ಪ ಪಟ್ಟಣದ ಹೊರ ವಲಯದಲ್ಲಿರುವ ಬಿಜಿಎಸ್ ವೆಂಕಟೇಶ್ವರ ವಿದ್ಯಾ ಮಂದಿರ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹಾಸ್ಟೆಲ್‍ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿದ್ದಾನೆ.
ಈ ಸಂಬಂಧ ಕೊಪ್ಪ ತಾಲ್ಲೂಕು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ, ತನಿಖೆ ಮುಂದುವರೆದಿದೆ.