ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

Date:

Advertisements
  • ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು
  • ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ದೂರುಗಳಿವೆ

    ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೀದರ್‌ನಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲಾ ಸಭೆಯಲ್ಲಿ ಅವರು ಮಾತನಾಡಿದರು. “ಕಲ್ಯಾಣ ಕರ್ನಾಟಕ ಭಾಗದ ಜಿಲ್ಲಾ ಆಸ್ಪತ್ರೆ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಕ್ರಮವಹಿಸಲಾಗುವುದು. ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ನಡೆಯದಂತೆ ನಿಗಾವಹಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರ್ಭಿಣಿಯರು ರಕ್ತ ಹೀನತೆಯಿಂದ ಹೆಚ್ಚಾಗಿ ಬಳಲುತ್ತಿರುವ ಶಂಕೆ ಇದೆ ಈ ಹಿನ್ನೆಲೆಯಲ್ಲಿ ಎಚ್ಚರ ವಹಿಸಿ ಹೆಚ್ಚಿನ ಪರಿಕ್ಷೇಗಳನ್ನು ನಡೆಸಿ ಇಂತಹ ಲಕ್ಷಣ ಕಂಡುಬರುವ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಯಾರು ಸಹ ಇದರ ಬಗ್ಗೆ ನಿರ್ಲಕ್ಷ ತೋರಬಾರದು” ಎಂದು ಹೇಳಿದರು.

“ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಮುಂಬರುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳಿಗೆ ನೀಡಲಾಗುವ ಲಸಿಕೆಗಳನ್ನು ಸಮಯಕ್ಕೆ ಸರಿಯಾಗಿ ನೀಡುವಂತೆ ಅರೋಗ್ಯ ಅಧಿಕಾರಿಗಳು ನಿಗಾವಹಿಸಬೇಕು.ಆರೋಗ್ಯ ಇಲಾಖೆಯಡಿ ಜಾರಿಯಲ್ಲಿರುವ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಡಿಮೆ ತೂಕ ಹೊಂದಿದ ನವಜಾತ ಶಿಶುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆಯಾಗುವಂತೆ ನೋಡಿಕೊಳ್ಳಬೇಕು” ಎಂದರು.

ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಹಾಗೂ ರಾತ್ರಿ ಹೊತ್ತು ಇರುವುದಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಬರುತ್ತಿವೆ, ಮುಂದೆ ಹೀಗೆ ಆಗದಂತೆ ಅರೋಗ್ಯ ಅಧಿಕಾರಿಗಳು ಕ್ರಮವಹಿಸಬೇಕು. ಔಷಧಿ ಕೊರತೆ, ಸಣ್ಣ ಪುಟ್ಟ ಶಸ್ತ್ರ ಚಿಕಿತ್ಸೆ ಕೂಡ ಇಲ್ಲಿನ ವೈದ್ಯರು ಮಾಡುವುದಿಲ್ಲ ಎಂಬ ದೂರುಗಳು ಬರುತ್ತಿವೆ. ಇದರ ಬಗ್ಗೆ ಗಮನ ಹರಿಸಬೇಕು ಹಾಗೂ ವೆಂಟಿಲೇಟರ್ ಮತ್ತು ಅಂಬುಲೇನ್ಸ್ ಸರಿಯಾಗಿ ಕಾರ್ಯನಿರ್ವಸುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

Advertisements

ಸಭೆಯಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮವಾದ ಟೇಲಿ ಮಾನಸ ವಾಲ್ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು. ಶ್ರವಣ ದೋಷವಿರುವ ಮಕ್ಕಳಿಗೆ ಶ್ರವಣ ಯಂತ್ರಗಳನ್ನು ವಿತರಿಸಿದರು.ಸಭೆಗೂ ಮುನ್ನ ಸಚಿವರು ಬ್ರೀಮ್ಸ್ ಮತ್ತು 100 ಹಾಸಿಗೆಗಳ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ ? ಬೀದರ್ | ₹1.18 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಹುಮನ್ನಾಬಾದ ಶಾಸಕ ಡಾ. ಸಿದ್ದಲಿಂಗಪ್ಪ ಎನ್ ಪಾಟೀಲ್, ವಿಧಾನ ಪರಿಷತ ಸದಸ್ಯ ಅರವಿಂದಕುಮಾರ ಅರಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ನವೀನ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜ್ಞಾನೇಶ್ವರ ನಿರಗುಡಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

Download Eedina App Android / iOS

X