ರಾಜ್ಯದ ಪರಿಶಿಷ್ಟ ಪಂಗಡ ಇಲಾಖೆಗೆ ನೂತನವಾಗಿ ರಾಜ್ಯ ನಿರ್ದೇಶಕರಾಗಿ ನೇಮಕವಾಗಿರುವ ಕಲ್ಲೇಶ ಅವರನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ನಿಯೋಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ರಾಜ್ಯದ ಹಲವು ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಬೆಂಗಳೂರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ರಾಜ್ಯದಲ್ಲಿನ ಪರಿಶಿಷ್ಟ ಪಂಗಡ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು, ಇತ್ತೀಚೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ಎಸ್‌ಟಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಚಿಕನ್ ಊಟ ಸೇವಿಸಿ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆಯಾಗಿ ವಾಂತಿ ಭೇದಿಯಿಂದ ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಾದ ಪ್ರಕರಣದ ಬಗ್ಗೆ, ಬಳ್ಳಾರಿ ನಗರದ ಕೌಲಬಜಾರ ಎಸ್‌ಟಿ ಬಾಲಕರ ಹಾಸ್ಟೆಲ್ ಪ್ರಕರಣ ಕುರಿತು ಎಸ್ಎಫ್ಐ ನಿಯೋಗದಿಂದ ಚರ್ಚೆ ನಡೆಯಿತು.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯ
ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆ ಹೆಚ್ಚಳ ಮಾಡಿ ಮಂಜೂರು ಮಾಡಲು ಆಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ, ರಾಜ್ಯ ಪದಾಧಿಕಾರಿಗಳಾದ ಗಣೇಶ ರಾಠೋಡ್, ರಮೇಶ ವೀರಾಪುರ, ಗದಗ ಜಿಲ್ಲೆಯ ಜಿಲ್ಲಾ ಮುಖಂಡ ಚಂದ್ರು ರಾಠೋಡ್ ಇದ್ದರು.