ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ಒತ್ತಾಯ

Date:

Advertisements
  • ಕಾರ್ಮಿಕರ ಭೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರಿಗೆ ಮಾತ್ರ ಹೊಸ ಕಾರ್ಡ್ ಮಾಡಿಸಬೇಕು.
  • ಕಾರ್ಮಿಕ ಪಿಂಚಣಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸುವಂತೆ ಆಗ್ರಹ

ಕಟ್ಟಡ ಕಾರ್ಮಿಕರ ಶೈಕ್ಷಣಿಕ ಧನ ಸಹಾಯ ಬಿಡುಗಡೆ, ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು ಸಂಯೋಜಿತ) ಕಾರ್ಯಕರ್ತರು ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

“ಕಟ್ಟಡ ಕಾರ್ಮಿಕರ ಕಾರ್ಡ್ ನವೀಕರಣಕ್ಕೆ ವೇತನ ಚೀಟಿ ಹಾಜರಾತಿ ಆದೇಶ ನೀಡಲು ವಾಪಸು ಪಡೆಯಬೇಕು, ಹೊಸ ಕಾರ್ಡ್ ಗೆ ಅರ್ಜಿ ಹಾಕಿದ ಕಾರ್ಮಿಕರಿಗೆ ತಕ್ಷಣ ದಾಖಲೆಗಳು ಪರಿಶೀಲಿಸಿ ಹೊಸ ಕಾರ್ಡ್ ವಿತರಿಸುವಲ್ಲಿ ವಿಳಂಬ ಧೋರಣೆ ತೊರಿದ ಕಾರ್ಮಿಕ ನೀರಿಕ್ಷರ ಹಾಗೂ ಡಾಟಾ ಅಪರೇಟರ್ ಮೇಲೆ ಕ್ರಮ ಜರುಗಿಸಬೇಕು, ಲಿಂಗಸೂಗುರು ದೇವದುರ್ಗ, ಕಾರ್ಮಿಕ ಕಛೇರಿಗಳು ಬೇರೆ ಕಡೆ ಸ್ಥಳಾಂತರ ಮಾಡಬೇಕು” ಎಂದು ಒತ್ತಾಯಿಸಿದರು.

“ಕಾರ್ಮಿಕರ ಭೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರಿಗೆ ಮಾತ್ರ ಹೊಸ ಕಾರ್ಡ್ ಮಾಡಿಸಬೇಕು, ಅರ್ಜಿ ವಿಲೇವಾರಿ ವಿಳಂಬ ತಡೆಗಟ್ಟಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು, ಕಾರ್ಮಿಕ ಇಲಾಖೆಯ ಜೀವಿತ ಪ್ರಮಾಣ ಪತ್ರ ನೀಡಬೇಕು, ಪಿಂಚಣಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸಿ ಎಲ್ಲಾ ಸಮಯದಲ್ಲಿ ಹಾಕಲು ಅನುಮತಿ ನೀಡಬೇಕು. ಜಿಲ್ಲೆಯ ಎಲ್ಲಾ ತಾಲೂಕ ಕೇಂದ್ರದಲ್ಲಿ ನಡೆಯುವ ಭೂಗಸ್ ಕಾರ್ಡ್ ಗಳನ್ನು ರದ್ದುಗೊಳಿಸಲು ತನಿಖಾ ತಂಡ ರಚಿಸಬೇಕು” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ ? ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರುದ್ರಪ್ಪ ನಾಯಕ, ರಾಜ್ಯ ಜಂಟಿ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ಉಪಾಧ್ಯಕ್ಷ ಯೂಸುಫ್ ಗ್ವಾಡಿಕಾರ, ಅನ್ವರ ಪಾಷಾ, ಉಪಾಧ್ಯಕ್ಷ ಡಿ.ಎಸ್. ಶರಣಬಸವ, ಕೆ.ಜಿ. ವೀರೇಶ, ನಿಂಗಪ್ಪ, ಶರ್ಫಿದ್ದಿನ್ ಪೋತ್ನಾಳ, ವೆಂಕಟೇಶ ಮದಿನಾಪೂರ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

Download Eedina App Android / iOS

X