ರಾಜ್ಯದಲ್ಲಿ ವಾಡಿಕೆಯಂತೆ ಜುಲೈನಲ್ಲಿ ಮುಂಗಾರು ಆಗಮನವಾಗಿಲ್ಲ. ಆಗಸ್ಟ್ನಿಂದಲೂ ಮಳೆಯ ಅಭಾವ ಹೆಚ್ಚಾಗಿದ್ದು, ರಾಜ್ಯಾದ್ಯಂತ ಬಿಸಿಲ ಧಗೆ ಅಧಿಕವಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಮಳೆಗಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ಉಷ್ಣಾಂಶ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಫ್ಯಾನ್ಸಿ ನಂಬರ್ ಹರಾಜಿಗೆ ಆಗಸ್ಟ್ 31 ರಂದು ಅರ್ಜಿ ಆಹ್ವಾನಿಸಿದ ಸಾರಿಗೆ ಇಲಾಖೆ
ಆಗಸ್ಟ್ನಲ್ಲಿ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆಯ ಕೊರತೆ ಎದುರಾದ ಕಾರಣ ರಾಜ್ಯದ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ.