ಜಾತಿ/ಸಿಂಧುತ್ವ ಪ್ರಮಾಣ ಪತ್ರ ವಿಳಂಬವಾದರೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ ವರದಿ ಕೊಟ್ಟ ನಂತರವೂ ವಿಳಂಬವಾದರೆ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡಿದ್ದಾರೆ ಎಂದು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಹಾಗೂ ಕೊಡುಗು ಜಿಲ್ಲೆಯಲ್ಲಿ ಕುರುಬ ಸಮುದಾಯದವರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಗೊಂಡ ಸಮುದಾಯದವರ ಅಹವಾಲುಗಳನ್ನು ಸಮಗ್ರವಾಗಿ ಕೇಳಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಸಿ.ಆರ್.ಇ ಸೆಲ್ ಇರುವುದು ಹಕ್ಕುಗಳ ರಕ್ಷಣೆಗಾಗಿ ಹಾಗೂ ಪ್ರಕರಣಗಳ ವಿಚಾರಣೆಗಾಗಿ. ಸಿಆರ್‌ಇ ಸೆಲ್ ವಿಚಾರಣೆ ಮಾಡಿ ನೀಡಿದ ವರದಿಯನ್ನು ಅಂಗೀಕರಿಸಬೇಕು. ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಎನ್ನುವ ಸಮುದಾಯ ಎಸ್.ಟಿ ಗೆ ಸೇರಿದೆ. ಶಾಲಾ ದಾಖಲಾತಿ, ಪೋಷಕರ ಇತಿಹಾಸವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಪಂಜಾಬ್‌ ಸಿಎಂಗೆ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಎಚ್ಚರಿಕೆ ನೀಡಿದ ರಾಜ್ಯಪಾಲ

ದೂರುಗಳಿದ್ದರೆ ತನಿಖೆ ಮಾಡಿ

ಪ್ರಮಾಣಪತ್ರ ನೀಡಲು ಅನಗತ್ಯವಾಗಿ ವಿಳಂಬ ಮಾಡಬಾರದು. ದೂರುಗಳು ಇದ್ದರೆ ತನಿಖೆ ಮಾಡಿಸಬೇಕು. ದೂರುಗಳು ಇಲ್ಲದೆ ಹೋದರೆ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ಕೈಗೊಳ್ಳುವಂತಿಲ್ಲ ಎಂದು ಸೂಚಿಸಿದರು.

ಸಿ.ಆರ್.ಇ ಸೆಲ್ ನವರು ತನಿಖೆ ಮಾಡಿದ ವರದಿ ನೀಡಿದ ಕೂಡಲೇ ಅಂಗೀಕರಿಸಿ, ಸಂಬಂಧಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಇತ್ಯರ್ಥಗೊಳಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಅನಗತ್ಯವಾಗಿ ವಿಳಂಬ ಸಲ್ಲದು
ಕೊಡಗು ಜಿಲ್ಲೆಯ ಕುರುಬ ಸಮುದಾಯದವರು ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿರುತ್ತಾರೆ. ಅನಗತ್ಯವಾಗಿ ವಿಳಂಬ ಮಾಡದೇ ತ್ವರಿತವಾಗಿ ಜಾತಿ ಪ್ರಮಾಣ ಪತ್ರಗಳನ್ನು ನೀಡಬೇಕು. ಜಾತಿ ಪ್ರಮಾಣ ಪತ್ರದ ಆಧಾರದ ಮೇಲೆ ವಿದ್ಯಾರ್ಥಿ ವೇತನಗಳನ್ನು ನೀಡಬಹುದು ಎಂದು ಸೂಚಿಸಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವಜನಸೇವಾ ಹಾಗೂ ಕ್ರೀಡಾ ಸಚಿವ ಬಿ ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ ಮಣಿವಣ್ಣನ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ ಕಲ್ಲೇಶ್, ಗೊಂಡ ಹಾಗೂ ಕುರುಬ ಸಮಾಜದ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X