ಬೀದರ್‌ | ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಬೇಕು

Date:

Advertisements
  • ಕಮಠಾಣ ಸರ್ಕಾರಿ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್‌ ಶಿಬಿರ
  • ಕಾನೂನು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕಲಿಯಲು ಇದೊಂದು ಸದಾವಕಾಶವಿದ್ದಂತೆ.

ಕಾನೂನು ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪ ಕನಕಟ್ಟೆ ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಹಾಗೂ ಬೀದರ್‌ನ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆರ್.ವಿ.ಬಿಡಪ್ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಕಮಠಾಣ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ 2022-23ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿ ಜೀವನದಲ್ಲಿ ಕಲಿಯಲು ಇದೊಂದು ಸದಾವಕಾಶವಿದ್ದಂತೆ, ನಮ್ಮ ಭಾಗದಲ್ಲಿ ಮಾರ್ಚದಿಂದ ಮೇವರೆಗೆ ಹೆಚ್ಚು ಬಿಸಿಲು ಇರುತ್ತದೆ. ಹಾಗಾಗಿ ಎಲ್ಲಾ ಎನ್.ಎಸ್.ಎಸ್.ಶಿಬಿರಾರ್ಥಿಗಳು ಕಮಠಾಣದ ಪ್ರತಿ ಮನೆಯ ಮುಂದುಗಡೆ ಒಂದೊಂದು ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ಆಯಾ ಮನೆಯವರೆಗೆ ನೀಡಬೇಕು” ಎಂದರು.

Advertisements

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ ಅವರು ಮಾತನಾಡಿ, “ವಕೀಲರಾದವರು ಮಾತನಾಡದವರಿಗೆ ಮಾತನಾಡಿಸಬೇಕು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ಉಪನ್ಯಾಸಕರನ್ನು ಕರೆಯಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸದೆ ಕಮಠಾಣ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿರುವುದು ಸಂತಸದ ವಿಷಯವಾಗಿದೆ. ಮಕ್ಕಳಲ್ಲಿ ಶಿಸ್ತು ಬಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಕಮಠಾಣ ಗ್ರಾಮ ಪಂಚಾಯತ ಅಧ್ಯಕ್ಷ ರವಿಕುಮಾರ ಶಂಕರ ನಡುವಿನದೊಡ್ಡಿ, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ, ಸತೀಶ ಪಾಟೀಲ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಿಸಿಸಿ ಬ್ಯಾಂಕ್‌ನಲ್ಲಿ ₹400 ಕೋಟಿ ಸಾಲ ಪಡೆದಿರುವ ಖಂಡ್ರೆ, ಬ್ಯಾಂಕ್ ಮುಳುಗಿಸಲು ಹೊರಟಿದ್ದಾರೆ: ಖೂಬಾ

ಕಾರ್ಯಕ್ರಮದಲ್ಲಿ ಕಮಠಾಣ ಗ್ರಾಮ ಪಂಚಾಯತ ಉಪಾಧ್ಯಕ್ಷ ಯಾಸ್ಮೀನ ಬೇಗಂ, ಬೀದರ ತಾ.ಪಂ. ಸದಸ್ಯ ಮಹ್ಮದ ಗೌಸೋದ್ದಿನ್, ಕಮಠಾಣ ಗ್ರಾ.ಪಂ.ಪಿಡಿಒ ಶಶಿ ಕಪ್ಪೂರ, ಕಾಲೇಜು ಪ್ರಾಂಶುಪಾಲ ಪ್ರತಿಭಾ ಡಿ., ಬೀದರ ಆರ್.ವಿ.ಬಿಡಪ್ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಟಿ. ಮುನಿಯಪ್ಪ, ಸಹಾಯಕ ಪ್ರಾಧ್ಯಾಪಕ ಡಾ.ಗಣಪತಿ ಟಿ., ಜಯಶ್ರೀ ಪಾಟೀಲ, ಡಾ. ಜೈ ಸಂತೋಷಿಮಾ ಸೇರಿದಂತೆ ಕಾನೂನು ಮಹಾವಿದ್ಯಾಲಯ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತಿವೃಷ್ಟಿ ಹಾನಿ | ಔರಾದ ಕ್ಷೇತ್ರಕ್ಕೆ ವಿಶೇಷ ಅನುದಾನ ಕೊಡಿ : ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಬೀದರ್‌ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ...

ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ...

ಬೀದರ್‌ | ವಿನಯ ಮಾಳಗೆಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರೂ ಆದ ಬೀದರ್‌ನ ಟೀಂ ಯುವಾ...

ಬೀದರ್‌ | ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ದೀನ ದಲಿತರ ಹಿಂದುಳಿದ...

Download Eedina App Android / iOS

X