- ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವರಾಮ್ ಹೆಬ್ಬಾರ್
- ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಹೆಬ್ಬಾರ್
ಆಪರೇಷನ್ ಹಸ್ತದ ಚರ್ಚೆ ಜೋರಾಗಿರುವ ನಡುವೆ ಬಿಜೆಪಿ ನಾಯಕ ಶಿವರಾಮ್ ಹೆಬ್ಬಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಶುಕ್ರವಾರ ರಾತ್ರಿ ಖಾಸಗಿಯಾಗಿ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವರಾಮ್ ಹೆಬ್ಬಾರ್ ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ನತ್ತ ಚಿತ್ತ ನೆಟ್ಟಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕೂಡ ಸಿದ್ದರಾಮಯ್ಯ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್
ಆದರೆ, ಕಾಂಗ್ರೆಸ್ ಸೇರುವ ಬಗ್ಗೆ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ನಿರಾಕರಿಸಿದ್ದಾರೆ. ಆದರೂ ಇಬ್ಬರು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳ ಕುರಿತಾಗಿ ಚರ್ಚೆ ಮಾಡುವುದು ಕಾರಣ ಎಂದು ಎಸ್ಟಿ ಸೋಮಶೇಖರ್ ಹೇಳಿದ್ದರು. ಇದೇ ಹೇಳಿಕೆಯನ್ನು ಶಿವರಾಮ್ ಹೆಬ್ಬಾರ್ ಕೂಡಾ ಪುನರ್ ಉಚ್ಚರಿಸಿದ್ದಾರೆ.