ಬೆಂಗಳೂರು | ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ

Date:

Advertisements

ಕರ್ನಾಟಕದಲ್ಲಿ ಸದ್ಯ ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಯುವಜನರಲ್ಲಿಯೂ ಶೇ.22ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಈ ಹಿನ್ನೆಲೆ, ಹೃದಯಾಘಾತ ನಿರ್ವಹಣೆ ಕಾರ್ಯಕ್ರಮವಾದ ‘ಎಸ್‌ಟಿಇಎಮ್ಐ’ 2023ರ ಏಪ್ರಿಲ್‌ನಿಂದ ಪ್ರಾರಂಭವಾಗಿದೆ. ಕಾರ್ಯಕ್ರಮದಡಿ ಇಲ್ಲಿಯವರೆಗೂ 50,000 ಜನರನ್ನು ಪರೀಕ್ಷಿಸಲಾಗಿದೆ ಎಂದು ಎಸ್‌ಟಿಇಎಮ್ಐ ಉಸ್ತುವಾರಿ ಶಿಖರ್ ಶ್ರೀವಾಸ್ತವ ತಿಳಿಸಿದ್ದಾರೆ.

ಎಸ್‌ಟಿ ಸೆಗ್ಮೆಂಟ್ ಎಲಿವೇಷನ್ ಮಯೋಕಾರ್ಡಿಯಲ್ ಇನ್ಫಾರ್‍ಕ್‌ಷನ್ (ಎಸ್ಟಿಇಎಮ್ಐ) ಕಾರ್ಯಕ್ರಮವನ್ನು ಮಹಾರಾಷ್ಟ್ರ, ಗೋವಾ, ಓಡಿಶಾ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕದಲ್ಲಿ ನಾಲ್ಕು ತಿಂಗಳಲ್ಲಿ 50,000 ಜನರಿಗೆ ಸ್ಕ್ಯಾನ್ ಮಾಡಲಾಗಿದೆ. ಯೋಜನೆಯು 1,684ಕ್ಕೂ ಹೆಚ್ಚು ನಿರ್ಣಾಯಕ ಪ್ರಕರಣಗಳಲ್ಲಿ ಸಮಯೋಚಿತ ತಪಾಸಣೆ ಮತ್ತು ನಿರ್ವಹಣೆಯಲ್ಲಿ ಸಹಾಯ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜಯದೇವ ಹೃದ್ರೋಗ ಮತ್ತು ಸಂಶೋಧನಾ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಮಾತನಾಡಿ, “ಕಳೆದ 10-15 ವರ್ಷಗಳಲ್ಲಿ ಯುವ ಮತ್ತು ಮಧ್ಯ ವಯಸ್ಕರಲ್ಲಿನ ಹೃದಯಾಘಾತ ಪ್ರಕರಣಗಳಲ್ಲಿ ಶೇ.22ರಷ್ಟು ಏರಿಕೆಯಾಗಿದೆ. ಜೀವನಶೈಲಿ ಬದಲಾವಣೆ, ಮದ್ಯಪಾನ, ಧೂಮಪಾನ, ಅನಾರೋಗ್ಯಕರ ಆಹಾರ ಸೇವನೆ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದಾಗಿ ಆಘಾತಗಳು ಸಂಭವಿಸಿವೆ” ಎಂದರು.

Advertisements

“ವಿಶೇಷವಾಗಿ ಆಂಜಿಯೋಪ್ಲ್ಯಾಸ್ಟಿ ಮಾಡಲು ಅಥವಾ ಹೃದಯಾಘಾತ ಪ್ರಕರಣಗಳನ್ನು ನಿರ್ವಹಿಸಲು ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆಯಿದೆ. ತಜ್ಞರಿಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಆರೈಕೆ ನೀಡಲು ಈ ಕಾರ್ಯಕ್ರಮವು ಸಹಾಯ ಮಾಡಿದೆ. ಚಿಕಿತ್ಸೆ ವಿಳಂಬವಾದರೆ ಸಾವಿನ ಅಪಾಯ ಶೇ.7ರಷ್ಟು ಹೆಚ್ಚುತ್ತದೆ” ಎಂದು ವಿವರಿಸಿದರು.

“ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಯೋಜನೆಯು ಕರ್ನಾಟಕದಾದ್ಯಂತ 15 ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಈ ಯೋಜನೆಯನ್ನು ಮುಂದಿನ ಎರಡು ತಿಂಗಳಲ್ಲಿ ಇನ್ನೂ ವಿಸ್ತರಿಸುವ ನಿರೀಕ್ಷೆಯಿದೆ. ತಾಲೂಕು, ಜಿಲ್ಲಾ ಮತ್ತು ಸಾಮಾನ್ಯ ಆಸ್ಪತ್ರೆಗಳನ್ನು ಒಳಗೊಂಡಿರುವ 45 ಆರೋಗ್ಯ ಸೌಲಭ್ಯಗಳನ್ನು ಎಸ್ಟಿಇಎಮ್ಐ ಪತ್ತೆ ಮತ್ತು ಥ್ರಂಬೋಲಿಸಿಸ್‌ಗೆ ಸ್ಪೋಕ್‌ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ – ಬೆಂಗಳೂರು, ಮೈಸೂರು ಮತ್ತು ಕಲಬುರಗಿಗೆ ಕ್ಯಾಥ್ ಲ್ಯಾಬ್ ಸೌಲಭ್ಯಗಳನ್ನು ಹೊಂದಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X