ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಕೂಡದು: ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements
  • ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ: ಸಿಎಂ
  • ‘ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ, ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ’

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು ಎಂದರೆ ಜನರ ಕೇಸುಗಳು. ಜನರಿಗೆ ನ್ಯಾಯ ಸಿಗುವ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಬಡವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗುವ ಶಕ್ತಿ ಇರುವುದಿಲ್ಲ. ಬಡವರಿಗೆ ನ್ಯಾಯ ಸಿಗದಿದ್ದರೆ ಸರ್ಕಾರಿ ವಕೀಲರನ್ನು ನೇಮಿಸಿಕೊಂಡಿದ್ದು ಸಾರ್ಥಕ ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ-2023ರ ಸಭೆಯಲ್ಲಿ ಅವರು ಮಾತನಾಡಿದರು.

“ಪ್ಲೀಡಿಂಗ್ಸ್ ಸರಿಯಾಗಿ, ಪರಿಣಾಮಕಾರಿಯಾಗಿ ಬರೆಯುವುದು ಬಹಳ ಮುಖ್ಯ. ಈ ಹಂತದಲ್ಲೇ ಅಸಡ್ಡೆ, ಉಡಾಫೆತನ ಪ್ರದರ್ಶಿಸಿದರೆ ನ್ಯಾಯ ಪ್ರಕ್ರಿಯೆಯ ಮುಂದಿನ ಎಲ್ಲ ಹಂತಗಳಲ್ಲಿ ವೈಫಲ್ಯ ಆಗುತ್ತದೆ. ಆದ್ದರಿಂದ ಬಹಳ ಜವಾಬ್ದಾರಿಯುತವಾಗಿ ಸರ್ಕಾರಿ ವಕೀಲರು ವರ್ತಿಸಬೇಕು” ಎಂದರು.

Advertisements

“ಸರ್ಕಾರಿ ವಕೀಲರು ಮತ್ತು ಅಧಿಕಾರಿಗಳ ವೈಫಲ್ಯಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ. ನಮಗೆ ಹಣ ಕೊಡುವುದು ಜನರು. ಜನರ ಹಣದಲ್ಲಿ ನಮಗೆ ಸವಲತ್ತುಗಳು ಸಿಗುತ್ತಿವೆ. ಈ ಬಗ್ಗೆ ನಮಗೆ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆ ಹಾಗೂ ಧನ್ಯತೆ ಇರಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬ್ಯಾರಿಕೇಡ್ ಬಂಧಿ | ಬಿಜೆಪಿ ನಾಯಕರ ಕಾಲೆಳೆದ ಪ್ರಿಯಾಂಕ್ ಖರ್ಗೆ, ದಿನೇಶ್‌ ಗುಂಡೂರಾವ್

“ಕೆಲವು ನ್ಯಾಯಾಧೀಶರು ಮುಖ ನೋಡಿ ಮಣೆ ಹಾಕುತ್ತಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಇದನ್ನು ಎಲ್ಲರೂ ಒಟ್ಟಾಗಿ ಅಳಿಸಬೇಕು. ಪ್ರಕರಣಗಳಲ್ಲಿ ಅನಗತ್ಯವಾಗಿ ದಿನಾಂಕ ಪಡೆಯಬಾರದು. ಕೇಸು ನಡೆಸಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದನ್ನು ಪರಿಣಾಮಕಾರಿಯಾಗಿ ವಿರೋಧಿಸಬೇಕು. ಅಲ್ಲೇ ನಿಮ್ಮಗಳ ಅರ್ಹತೆ ಗೊತ್ತಾಗುತ್ತದೆ” ಎಂದರು.

“ನ್ಯಾಯಾಂಗ ನಿಂದನೆ ಆಗದಂತೆ ವೃತ್ತಿಪರತೆ ಪ್ರದರ್ಶಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಸರ್ಕಾರವೇ ನಿಮ್ಮ ಕಕ್ಷಿದಾರ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಸರ್ಕಾರ ಮತ್ತು ಜನರ ಹಿತ ಕಾಪಾಡುವ ಮತ್ತು ಸರ್ಕಾರದ ಆಸ್ತಿ ಉಳಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ” ಎಂದು ಸರ್ಕಾರಿ ವಕೀಲರಿಗೆ ಕಿವಿಮಾತು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X