ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲವೆಂದು ಒಂದು ಕಡೆ ಸರ್ಕಾರ ಹೇಳುತ್ತಿದ್ದರೆ, ಮತ್ತೊಂದು ಕಡೆಯಿಂದ ಶಾಖೋತ್ಪನ್ನ ಕೇಂದ್ರಗಳ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತಗೊಂಡಿದೆ.
210 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ ಐದು ಘಟಕ ಹಾಗೂ 250 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ 8ನೇ ಘಟಕಗಳು ಸ್ಥಗಿತಗೊಂಡಿದ್ದ, ನಾಲ್ಕು ಮತ್ತು ಐದನೇ ಘಟಕ ಮಾತ್ರ ಉತ್ಪಾದನೆಯಲ್ಲಿ ತೊಡಗಿದ್ದು 1720 ಮೆ.ವ್ಯಾ ವಿದ್ಯುತ್ ಸಾಮರ್ಥ್ಯ ಹೊಂದಿರುವ ಕೇಂದ್ರದಲ್ಲಿ 250 ಮೆ.ವ್ಯಾ ವಿದ್ಯುತ್ ಉತ್ಪಾದಿಸಲಾಗುತ್ತಿದೆ.
ಕರ್ನಾಟಕ ವಿದ್ಯುತ್ ನಿಗಮ ಐದು ಘಟಕಗಳ ಸ್ಥಗಿತಗೊಳ್ಳಲು ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿದ್ದು, ಬಂಕರ್ ಸೇರಿದಂತೆ ಇತರೆ ಕಾರಣ ನೀಡಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಬಳ್ಳಾರಿ ಶಾಖೋತ್ಪನ್ನ ಕೇಂದ್ರದ ಮೂರು ಘಟಕಗಳಲ್ಲಿ ಎರಡನೇ ಘಟಕ ಸ್ಥಗಿತಗೊಂಡಿದೆ.
ಈ ಸುದ್ದಿ ಓದಿದ್ದೀರಾ? ಮೇಕೆದಾಟು | ಸಹಕಾರ ಕೋರಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುವೆ: ಡಿಕೆ ಶಿವಕುಮಾರ್
ವೈಟಿಪಿಎಸ್‌ನ ಎರಡು ಘಟಕಗಳು ಉತ್ಪಾದನೆಯಲ್ಲಿ ತೊಡಗಿವೆ. ಜಲಾಧಾರಿತ ಘಟಕಗಳೂ ಕೂಡ ಸ್ಥಗಿತಗೊಂಡಿದ್ದರಿಂದ ರಾಜ್ಯ ಬೇಡಿಕೆ ಉತ್ಪಾದನೆಯಲ್ಲಿ ಕೊರತೆ ಕಂಡಿದೆ. 11 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ 3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಆದರೂ ಪರ್ಯಾಯ ಮೂಲಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ನಿಗಮ ಹೇಳಿಕೊಂಡಿದೆ.