ಹಾವೇರಿ | ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಿಗೆ ಎಂಎಲ್‌ಸಿ ಸ್ಥಾನಕ್ಕಾಗಿ ಒತ್ತಾಯ

Date:

Advertisements

ಪೌರಕಾರ್ಮಿಕರ ಧ್ವನಿಯಾಗಿರುವ ನಾರಾಯಣರಿಗೆ ಕಾಂಗ್ರೆಸ್‌ ಸರ್ಕಾರದಲ್ಲಿ ವಿಧಾನ ಪರಿಷತ್‌ ಸದಸ್ಯ(ಎಂಎಲ್‌ಸಿ) ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ‌ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಅವರು ಒತ್ತಾಯ ಮಾಡಿದ್ದಾರೆ.

ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಅವರು ಹಾವೇರಿಯಲ್ಲಿ ಪ್ರಕಟಣೆಗೆ ತಿಳಿಸಿದ್ದು, “ಕಳೆದ ಮೂರು ದಶಕದಿಂದ ನಾಡಿನ ಪೌರಕಾರ್ಮಿಕರ, ಶೋಷಿತರ ಸಮಾಜದ ಧ್ವನಿಯಾಗಿ ಚಳುವಳಿ ಮೂಲಕ ಗುರುತಿಸಿಕೊಂಡಿರುವ ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡ ನಾರಾಯಣ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಂಎಲ್ಸಿ ಸ್ಥಾನ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಶ್ವಾಸ ಇಟ್ಟು ಕಾಂಗ್ರೆಸ್‌ ಸೇರುವವರನ್ನು ತಡೆಯುವುದಿಲ್ಲ: ಡಿಕೆ ಶಿವಕುಮಾರ್

Advertisements

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡು ಸದಾಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡು ರಾಜ್ಯದಲ್ಲಿ ಉತ್ತಮ ಸಮಾಜ‌ ನಿರ್ಮಾಣ ಮಾಡಲು ಹಗಲಿರುಳು ದುಡಿದಿದ್ದಾರೆ ಹಾಗೂ ಮಾಜಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿರುವ ಅವರು ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಂತ್ರಿಮಂಡಲದಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ನಾರಾಯಣ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ದೊರಕಿಸಿಕೊಡಬೇಕು” ಎಂದು ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X