ಬಿಜೆಪಿ ಮುಖಂಡರು ಡಿಕೆ ಶಿವಕುಮಾರ್ ಅವರ ಬಳಿ ಹೋಗುವುದು, ಬರುವುದು ನೋಡಿದರೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಪಕ್ಕಾ. ಇತ್ತೀಚಿನ ಬೆಳವಣಿಗೆಗಳು ಕೂಡ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿವೆ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರು ರಸ್ತೆಯಲ್ಲಿ ಸಾಯುತ್ತಿರುವಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂದರೆ ಅವರ ಮನಸ್ಥಿತಿ ಯಾವ ಮಟ್ಟದಲ್ಲಿತ್ತು ಎನ್ನುವುದನ್ನು ಊಹಿಸಿಕೊಳ್ಳಬೇಕು. ಈ ಬಗ್ಗೆ ತನಿಖೆಯಾಗಲಿ, ಕಾರಣರಾದವರಿಗೆ ತಕ್ಕ ಶಾಸ್ತಿಯಾಗಲಿ” ಎಂದರು.
“ಸೆಪ್ಟೆಂಬರ್ ವೇಳೆಗೆ ರಾಜ್ಯದ ಪ್ರವಾಸೋದ್ಯಮ ನೀತಿಗೆ ಅಂತಿಮ ರೂಪ ಕೊಡಲಾಗುವುದು. ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಮ್ಮನಿಲುವನ್ನು ಈಗಾಗಲೇ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದೇವೆ. 2-3 ದಿನಗಳಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಬಹುದು. ಸಂಕಷ್ಟ ಸೂತ್ರ ರಚನೆಯಾಗಬೇಕು ಎನ್ನುವುದು ನಮ್ಮ ಬೇಡಿಕೆ” ಎಂದು ಹೇಳಿದರು.