ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿರಳೆ ಬಿದ್ದ ಹಾಲನ್ನು ಕುಡಿದು 20 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಅಮಾನವೀಯ ಘಟನೆ ಖಂಡನೀಯ ಎಂದು ಎಐಆರ್‌ಎಸ್‌ಒ ರಾಜ್ಯ ಸಮಿತಿ ಕಾರ್ಯದರ್ಶಿ ಸಂದೀಪ್ ಬಿ ಆರ್ ತೀವ್ರವಾಗಿ ಖಂಡಿಸಿದರು.
“ನಿತ್ಯ ಶಾಲೆಯಲ್ಲಿ ಮಕ್ಕಳಿಗೆ ಹಾಲನ್ನು ವಿತರಿಸುವಂತೆ ಶನಿವಾರವೂ ವಿತರಿಸಲಾಗಿತ್ತು. ಈ ಹಾಲನ್ನು ಕುಡಿದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿದೆ. ಬಳಿಕ ಹಾಲಿನಲ್ಲಿ ಜಿರಳೆ ಪತ್ತೆ ಆಗಿರುವುದು ತಿಳಿದುಬಂದಿದೆ. ಈ ಅವಘಡಕ್ಕೆ ಶಿಕ್ಷಕರು ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷವೇ ಕಾರಣವಾಗಿದೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿರಳೆ ಬಿದ್ದ ಹಾಲು ಸೇವನೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಪರಿಶೀಲನೆ ನಡೆಸಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
“ಇನ್ನು ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದ ಹಾಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ಕರೆಕೊಡಲಾಗುವುದು” ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದರು.