ಮೇಲ್ಜಾತಿಗಳ ವಿರುದ್ಧ ಪ್ರತಿರೋಧದ ಚಳವಳಿ ಕಟ್ಟಿದ್ದ ದಲಿತ ಹೋರಾಟಗಾರ ಅಯ್ಯನ್ ಕಾಳಿ

Date:

Advertisements

ದಲಿತ ಹೋರಾಟಗಾರ, ಮಹಾತ್ಮ ಅಯ್ಯನ್ ಕಾಳಿ(1863-1941) ಹುಟ್ಟಿ ಇಂದಿಗೆ 160 ವರ್ಷಗಳಾದವು.

ಊರಿನ ಮುಖ್ಯ ರಸ್ತೆಗಳಲ್ಲಿ ಅಸ್ಪೃಶ್ಯರು ಓಡಾಡುವುದು, ದಲಿತ ಹೆಣ್ಣು ಮಕ್ಕಳು ಮೈತುಂಬ ಬಟ್ಟೆ ತೊಡುವುದು, ದುಡಿಯುವ ಜನ ತಮ್ಮ ದುಡಿಮೆಗೆ ತಕ್ಕ‌ ಪ್ರತಿಫಲವನ್ನು ಕೇಳುವುದು ನಿಷಿದ್ಧವಾಗಿದ್ದ ಕಾಲದಲ್ಲಿ ಇಂತಹ ಅನ್ಯಾಯಗಳ ವಿರುದ್ಧ ಸಿಡಿದು ನಿಂತು, ಮೇಲ್ಜಾತಿಗಳ ವಿರುದ್ಧ ಪ್ರತಿರೋಧದ ಚಳವಳಿಯನ್ನು ಕಟ್ಟಿದವರು ಅಯ್ಯನ್ ಕಾಳಿ.

ಅಸ್ಪೃಶ್ಯರ ಹಕ್ಕುಗಳಿಗಾಗಿ ಬೀದಿಯಲ್ಲಿ ನಿಂತು ಬಡಿದಾಡಿದ ಈ ವೀರ, ದೇಶದಲ್ಲಿ ಕಮ್ಯುನಿಸ್ಟ್ ಚಳವಳಿ ಹುಟ್ಟುವುದಕ್ಕು ಎಷ್ಟೋ ವರ್ಷ ಮೊದಲೇ ಅಸ್ಪೃಶ್ಯರು ಸೇರಿದಂತೆ ಎಲ್ಲ ದುಡಿಯುವ ತಳ ಸಮುದಾಯಗಳನ್ನು ಒಗ್ಗೂಡಿಸಿ ವರ್ಣ ವ್ಯವಸ್ಥೆಯ ವಿರುದ್ಧ ವರ್ಗ ಹೋರಾಟವನ್ನು ರೂಪಿಸಿದ್ದ ಕ್ರಾಂತಿಕಾರಿ.‌

Advertisements

ಅಸ್ಪೃಶ್ಯರ ಹಕ್ಕುಗಳ ಹೋರಾಟಕ್ಕಾಗಿ 1907ರಲ್ಲಿಯೇ ‘ಸಾಧುಜನ ಪರಿಪಾಲನ ಸಂಘ’ ಸ್ಥಾಪಿಸಿ ಕೇರಳ ಮತ್ತು ತಮಿಳುನಾಡಿನಲ್ಲಿ ಇವರು ರೂಪಿಸಿದ್ದ ಹೋರಾಟಗಳು ಚಾರಿತ್ರಿಕವಾದವುಗಳು.

ಅಸ್ಪೃಶ್ಯರಿಗೆ ನಿಷೇಧಿಸಲ್ಪಟ್ಟಿದ್ದ ರಸ್ತೆಗಳಲ್ಲಿ ಧೈರ್ಯದಿಂದ ಎತ್ತಿನ ಗಾಡಿಯನ್ನು ಓಡಿಸಿ ಈ ನೆಲದಲ್ಲಿ ಘನತೆಯಿಂದ ಬದುಕುವುದು ನನ್ನ ಹಕ್ಕು ಎಂದು ಎದೆಯುಬ್ಬಿಸಿ ಸಾರಿದ ಧೀರ.

ಚರಿತ್ರೆಯಲ್ಲಿ ಮೇಲ್ಜಾತಿಯ ಸಮಾಜ ಸುಧಾರಕರ ಬಗ್ಗೆ ಸಾವಿರಾರು ಪುಟಗಳನ್ನು ಮೀಸಲಿಟ್ಟಿರುವ ಈ ದೇಶ ಅಯ್ಯನ್ ಕಾಳಿಯಂತಹ ನಾಯಕನನ್ನು ತುಂಬಾ ವರ್ಷಗಳ ಕಾಲ ವಿಸ್ಮೃತಿಗೆ ಸರಿಸಿತ್ತು.

ನಮ್ಮ ಚರಿತ್ರೆಯನ್ನು ನಾವೇ ಬರೆದುಕೊಳ್ಳಬೇಕಾದ ಈ ಕಾಲದಲ್ಲಿ ಈ ಧೀಮಂತ ಕ್ರಾಂತಿಕಾರಿಯನ್ನು ಗೌರವದಿಂದ ನೆನೆಯೋಣ‌.

?s=150&d=mp&r=g
ವಿ ಎಲ್ ನರಸಿಂಹಮೂರ್ತಿ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ...

ಮತದಾರ ಪಟ್ಟಿ ಅಳಿಸಿ ತಪ್ಪಿಸಿಕೊಳ್ಳುತ್ತಿರುವ ಆಯೋಗ: ದೇಶದ ಪ್ರತಿಯೊಬ್ಬರೂ ಕೂಡ ಪ್ರಶ್ನೆಗೆ ಅರ್ಹರು

ದೇಶದ ಜನತೆ ಜಾಗೃತರಾಗಿ, ಈ ಅಸಮರ್ಪಕತೆಗಳ ವಿರುದ್ಧ ಧ್ವನಿ ಎತ್ತಿದರೆ ಮಾತ್ರ...

ಪೆಟ್ರೋಲ್‌ಗೆ ಇಥೆನಾಲ್ ಮಿಶ್ರಣ: ಪರಿಸರಕ್ಕೆ ಚೂರು ಲಾಭ, ವಾಹನಗಳಿಗೆ ಹೆಚ್ಚು ಅಪಾಯಕಾರಿ

ಇ20 ಮಿಶ್ರಣವು ಪರಿಸರಕ್ಕೆ ಒಂಚೂರು ಲಾಭದಾಯಕವಾದರೂ, ವಾಹನಗಳಿಗೆ ಅದರಲ್ಲೂ ಹಳೆಯ ಮಾದರಿ...

ಹೊಸ ಆದಾಯ ತೆರಿಗೆ ಮಸೂದೆ 2025: ಬದಲಾವಣೆಗಳು – ಅನಾನುಕೂಲಗಳು ಏನೇನು?

ನೂತನ ಮಸೂದೆಯು ಹಳೆಯ ಕಾಯ್ದೆಯನ್ನು ಸಂಪೂರ್ಣವಾಗಿ ಬದಲಿಸುವ ಗುರಿ ಹೊಂದಿದ್ದು, ತೆರಿಗೆ...

Download Eedina App Android / iOS

X