ರಾಜ್ಯದಲ್ಲಿ ಸರಿಯಾಗಿ ಮಳೆ ಆಗದ ಕಾರಣದಿಂದಾಗಿ ರಾಜ್ಯದ ಅನೇಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿಯೂ ಸಹ ಮಳೆ ಬಾರದೆ ರೈತರು ಸಂಕಷ್ಟಕ್ಕಿಡಾಗಿದ್ಧಾರೆ. ರಾಮದುರ್ಗ ತಾಲೂಕನ್ನು ಬರಪಿಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಮದುರ್ಗ ಕರ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರನ್ನು ಭೇಟಿ ಮಾಡಿದ ಸಂಘಟನೆಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ತಾಲೂಕಿನ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕನ್ನಾಗಿ ಘೋಷಣೆ ಮಾಡದಿದ್ದರೆ ರೈತರಿಗೆ ಮಾಡಿದ ಅನ್ಯಾಯ ಮಾಡಿದಂತಾಗುತ್ತದೆ” ಎಂದು ಹೇಳಿದ್ದಾರೆ.
“ಮಳೆ ಬಾರದೆ ಮಲಪ್ರಭಾ ನದಿಯು ಬತ್ತಿಹೊಗಿದ್ಧು ಕುಡಿಯುವ ನೀರಿಗೂ ಸಹ ಪರಿತಪಿಸಬೇಕಾದ ಸ್ಥಿತಿ ಎದುರಾಗಿದೆ. ಆದ್ದರಿಂದ, ಶಾಸಕರು ರಾಮದುರ್ಗ ತಾಲೂಕನ್ನು ಬರಪಿಡಿತ ತಾಲೂಕು ಎಂದು ಘೋಷಣೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಅಶೋಕ ಪಟ್ಟಣ, “ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳನ್ನು ರೈತ ಮುಖಂಡರೊಂದಿಗೆ ಭೇಟಿಯಾಗಿ ಚರ್ಚಿಸುತ್ತೇವೆ. ರಾಮದುರ್ಗ ತಾಲೂಕನ್ನು ಬರಪಿಡಿತ ತಾಲೂಕನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.
ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕ ಅಧ್ಯಕ್ಷರು ಮಲ್ಲಿಕಾರ್ಜುನ ರಾಮದುರ್ಗ, ಎಲ್ಲಪ್ಪ ದೊಡ್ಡಮನಿ, ಸುರೇಶ್ ಗುಂಜೇರಿ, ಈರಣ್ಣ ರಾಜನಾಳ, ರಮೇಶ್ ಗುಡಿಯನ್ನವರ್, ಭೀಮಶಿ ಕಡ್ಡನವರ್, ದ್ಯಾಮಣ್ಣ ಪೋತನ್ನವರ್, ಬಸವ ಯಾದವಾಡ, ವೆಂಕಣ್ಣ ಕೆಂಚ್ ರೆಡ್ಡಿ ಸೇರಿದಂತೆ ಹಲವರು ಇದ್ದರು.